ಮಂಗಳಗಂಗೋತ್ರಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ಪ್ರಕಟಣೆಗಳನ್ನು, ಪಠ್ಯಪುಸ್ತಕಗಳನ್ನು ಹೊರತುಪಡಿಸಿ ಶೇಕಡಾ 50 ರಿಯಾಯಿತಿಯಲ್ಲಿ ಓದುಗರಿಗೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಕನ್ನಡ ಪುಸ್ತಕ ಓದುವ ಸಂಸ್ಕೃತಿಯನ್ನು ಹೆಚ್ಚಿಸುವ ಉದ್ದೇಶದಿಂದ ಈ ರಿಯಾಯಿತಿಯನ್ನು ನೀಡಲಾಗುವುದು ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಹೇಳಿದರು.
ಅವರು ಸೋಮವಾರ ಮಂಗಳೂರು ವಿವಿ ಸಿಂಡಿಕೇಟ್ ಸಭಾಂಗಣದಲ್ಲಿ ಪ್ರಸಾರಾಂಗ ಪ್ರಕಟಿಸಿದ ದ್ವತೀಯ ಬಿ.ಎ ಕನ್ನಡ ಐಚ್ಛಿಕ ಮೂರನೇ ಚತುರ್ಮಾಸದ ಸಾಹಿತ್ಯ ಮಂಗಳ 3 ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಸಾರಾಂಗವು ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಪ್ರಕಟಿಸುತ್ತಿದ್ದು ಉತ್ತಮ ಮುಖಪುಟ, ವಿನ್ಯಾಸಗಳಿಂದ ಗುಣಮಟ್ಟದ ಕೃತಿಗಳನ್ನು ಹೊರತರುತ್ತಿದೆ. ಸ್ಥಳೀಯ ಸಂಸ್ಕೃತಿ ಸಂಶೋಧನೆಗೆ ಒತ್ತು ನೀಡುತ್ತಿದೆ ಎಂದರು.
ವಿವಿಯ ಹಣಕಾಸು ಅಧಿಕಾರಿ ಪ್ರೊ.ಸಂಗಪ್ಪ ಮಾತನಾಡಿ ವಿಶ್ವವಿದ್ಯಾನಿಲಯವು ಅಧ್ಯಯನ, ಅಧ್ಯಾಪನ ಮತ್ತು ಸಂಶೋಧನೆಗೆ ಪ್ರಧಾನ ಲಕ್ಷ್ಯ ಹೊಂದಿದ್ದು ಈ ಮೂರರ ಫಲಿತಗಳನ್ನು ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ನೀಡಬೇಕಿದೆ. ಪ್ರಸಾರಾಂಗ ಈ ಕಾರ್ಯದಲ್ಲಿ ಪರಿಣಾಮಕಾರಿಯಾಗಿ ತೊಡಗಿಕೊಂಡಿದೆ ಎಂದರು.
ಪ್ರಸಾರಾಂಗದ ನಿರ್ದೇಶಕ ಪ್ರೊ.ಸೋಮಣ್ಣ ಹೊಂಗಳ್ಳಿ ಸ್ವಾಗತಿಸಿದರು. ಪಠ್ಯ ಪುಸ್ತಕದ ಕಾರ್ಯನಿರ್ವಾಹಕ ಸಂಪಾದಕ ಡಾ.ಮಾಧವ ಎಂ.ಕೆ ವಂದಿಸಿದರು. ಪ್ರಸಾರಾಂಗದ ಸಹಾಯಕ ನಿರ್ದೇಶಕ ಡಾ.ಧನಂಜಯ ಕುಂಬ್ಳೆ ನಿರೂಪಿಸಿದರು.
ಪ್ರಸಾರಾಂಗದ ಭರತ್, ಕನಕದಾಸ ಕೇಂದ್ರದ ಆನಂದ ಎಂ ಕಿದೂರು, ಕನ್ನಡ ವಿಭಾಗದ ಚಂದ್ರಶೇಖರ ಎಂ.ಬಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ