ರಾಷ್ಟ್ರೀಯ ನೇಮಕಾತಿ ಮಿಷನ್‌-1: ಆಯ್ಕೆಯಾದ ಸಿಬ್ಬಂದಿಗಳನ್ನುದ್ದೇಶಿಸಿ ಪ್ರಧಾನಿ ಭಾಷಣ ಇಂದು

Upayuktha
0



ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸಿಬ್ಬಂದಿ ಆಯ್ಕೆ ಆಯೋಗ ಮತ್ತು ಇತರ ನೇಮಕಾತಿ ಏಜೆನ್ಸಿಗಳ ಮೂಲಕ ಕೇಂದ್ರ ಸರ್ಕಾರದ ಸಚಿವಾಲಯಗಳ ಇಲಾಖೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಗೊಂಡಿರುವ ಸಿಬ್ಬಂದಿಗಳನ್ನು ಉದ್ದೇಶಿಸಿ 22 ಅಕ್ಟೋಬರ್ 2022 ರಂದು ಬೆಳಿಗ್ಗೆ 11.00 ಗಂಟೆಗೆ ಗುಜರಾತಿನಲ್ಲಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ರಾಷ್ಟ್ರೀಯ ನೇಮಕಾತಿ ಮಿಷನ್ -1 ಇದರ ಅಂಗವಾಗಿ ನಡೆಯಲಿದೆ. ಈ ಕಾರ್ಯಕ್ರಮವು ವರ್ಚುವಲ್ ಮೋಡ್ ಮೂಲಕ ರಾಷ್ಟ್ರವ್ಯಾಪಿ ನಡೆಯಲಿದೆ.  ಭಾರತದಾದ್ಯಂತ ವಿವಿಧ ಇಲಾಖೆಗಳಿಗೆ ಸುಮಾರು 75,000 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.


ಈ ಕಾರ್ಯಕ್ರಮವು ದೇಶದಾದ್ಯಂತ 50 ಕಡೆಗಳಲ್ಲಿ ನಡೆಯುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಾಗುತ್ತದೆ. ಬೆಂಗಳೂರಿನಲ್ಲಿ ಈ ಕಾರ್ಯಕ್ರಮವನ್ನು ಅಂಚೆ ಇಲಾಖೆಯು ಹಮ್ಮಿಕೊಂಡಿದ್ದು, ಗೃಹ ಇಲಾಖೆ, ಕಂದಾಯ ಇಲಾಖೆ, ರಕ್ಷಣಾ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಸಾರ್ವಜನಿಕ ವಲಯದ ಉದ್ದಿಮೆಗಳು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು ಈ ಬೃಹತ್ ನೇಮಕಾತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ.


ಬೆಂಗಳೂರಿನಲ್ಲಿ ಈ ಕಾರ್ಯಕ್ರಮವನ್ನು ಭಾರತ ಸರ್ಕಾರದ ಮಾನ್ಯ ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿಗಳ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ಜ್ಞಾನ ಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜು ಕ್ಯಾಂಪಸ್, 11, ಅರಮನೆ ರಸ್ತೆ, ಬೆಂಗಳೂರು - 560 001 ನಲ್ಲಿ 22 ಅಕ್ಟೋಬರ್ 2022 ರಂದು ಬೆಳಿಗ್ಗೆ 10.30 ಗಂಟೆಗೆ ಆಯೋಜಿಸಲಾಗಿದೆ. ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳ ಭಾಷಣದ ನೇರ ಪ್ರಸಾರವನ್ನು ಈ ಕಾರ್ಯಕ್ರಮದಲ್ಲಿ ಏರ್ಪಡಿಸಲಾಗಿದೆ.


ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಸಚಿವಾಲಯಗಳಿಗೆ ಹೊಸದಾಗಿ ಆಯ್ಕೆಯಾದ ಹಲವು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ಮಾನ್ಯ ಸಚಿವರು ಮತ್ತು ಗಣ್ಯರು ಹಸ್ತಾಂತರಿಸಲಿದ್ದಾರೆ.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top