ಗೋವಾ: ಕನ್ನಡಿಗರ 14ನೇ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸತೀಶ ಕುಮಾರ್ ಹೊಸ್ಮನಿ ಆಯ್ಕೆ

Upayuktha
0

ಪಣಜಿ: ಗೋವಾದ ಬಿಚೋಲಿಯಲ್ಲಿ ನವೆಂಬರ್ 13 ರಂದು ಆಯೋಜಿಸಲಾಗಿರುವ ಕನ್ನಡಿಗರ 14ನೇ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಿಜಿಟಲ್ ಗೃಂಥಾಲಯದ ರೂವಾರಿ ಸತೀಶ ಕುಮಾರ್ ಹೊಸ್ಮನಿ ಆಯ್ಕೆಯಾಗಿದ್ದಾರೆ. ಗೋವಾದ ಬಿಚೋಲಿಯಲ್ಲಿ ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಮತ್ತು ಕರ್ಮಭೂಮಿ ಕನ್ನಡ ಸಂಘ ಬಿಚೋಲಿ ಇವರ ಜಂಟಿ ಸಭೆಯಲ್ಲಿ ಸತೀಶ ಕುಮಾರ ಹೊಸ್ಮನಿ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ನವೆಂಬರ್ 13 ರಂದು ಗೋವಾದ ಬಿಚೋಲಿ ಹೀರಾಬಾಯಿ ಸಭಾಗೃಹದಲ್ಲಿ ನಡೆಯಲಿರುವ 14ನೇ ಸಾಂಸ್ಕೃತಿಕ ಸಮ್ಮೇಳನವನ್ನು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಉಧ್ಘಾಟನೆ ನೆರವೇರಿಸಲಿದ್ದಾರೆ. ಕೇಂದ್ರ ಸಚಿವ ಶ್ರೀಪಾದ ನಾಯ್ಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಕರ್ನಾಟಕ ಕಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಡಾ. ಸಿ ಸೋಮಶೇಖರ ಉಪಸ್ಥಿತರಿರುವರು. ಗೋವಾದ ಬಿಚೋಲಿಂನಲ್ಲಿ ನಡೆದ ಸಭೆಯಲ್ಲಿ ಸಮ್ಮೇಳನದ ಸಂಚಾಲಕ ಮಹೇಶಬಾಬು ಸುರ್ವೆ ರವರು ಸತೀಶಕುಮಾರ ಹೊಸ್ಮನಿ ರವರ ಹೆಸರನ್ನು ಸೂಚಿಸಿದರು. ಕರ್ನಾಟಕ ಜಾಗೃತಿ ವೇದಿಕೆಯ ಅಧ್ಯಕ್ಷರಾದ ವೀರೇಶ ರವರು ಅನುಮೋದಿಸಿದರು. ಸಭೆಯಲ್ಲಿ ಹಾಜರಿದ್ದ ಎಲ್ಲ ಪದಾಧಿಕಾರಿಗಳು ಸರ್ವಾನುಮತದಿಂದ ಅಂಗೀಕರಿಸಿದರು.


ಈ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರ ರೆಡ್ಡಿ ರವರು ಕಾರ್ಯಕ್ರಮ ಅದ್ದೂರಿಯಾಗಿ ನಡೆಸಬೇಕೆಂದು ಕಾರ್ಯಕ್ರಮದ ರೂಪುರೇಷೆಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ಕರ್ಮಭೂಮಿ ಕನ್ನಡ ಸಂಘದ ಪದಾಧಿಕಾರಿಗಳು ಮತ್ತು ಕರ್ನಾಟಕ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top