ಮೈಸೂರು: ಲೇಖಕ, ಪ್ರಕಾಶಕ ಗಣೇಶ ಅಮೀನಗಡ ಅವರ ರಂಗಭೂಮಿ ಕುರಿತ ಲೇಖನಗಳ ಸಂಕಲನ 'ಮಾತು ಹಾಡಾಗಲಿ ಹಾಡು ಮಾತಾಗಲಿ' ಕೃತಿ ವಿಜಯಪುರದ ಕನ್ನಡ ಪುಸ್ತಕ ಪರಿಷತ್ತು ನೀಡುವ 2021ನೇ ಸಾಲಿನ 'ಡಾ.ತೋಂಟದ ಸಿದ್ಧಲಿಂಗ ಶ್ರೀ' ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪ್ರಶಸ್ತಿಯು 5 ಸಾವಿರ ರೂಪಾಯಿ ನಗದು ಪುರಸ್ಕಾರ, ಸ್ಮರಣಿಕೆ ಹಾಗೂ ಪ್ರಮಾಣಪತ್ರ ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಅಕ್ಟೋಬರ್ 29ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿಯಲ್ಲಿ ಆಯೋಜಿಸಲಾಗಿದೆ. ಅಂದು ಕಡಣಿಯ ಬೆರಗು ಪ್ರಕಾಶನದ ಪುಸ್ತಕೋತ್ಸವವೂ ಏರ್ಪಡಿಸಲಾಗಿದ್ದು, ಪ್ರಕಾಶನದ 32 ಪುಸ್ತಕಗಳು ಬಿಡುಗಡೆಗೊಳ್ಳಲಿವೆ ಎಂದು ಕನ್ನಡ ಪುಸ್ತಕ ಪರಿಷತ್ತಿನ ಸಂಚಾಲಕ ಶಂಕರ ಬೈಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ