ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಅವರ ಮೇಲೆ ತಲ್ವಾರ್ ದಾಳಿಗೆ ಯತ್ನ

Upayuktha
0

ಬಂಟ್ವಾಳ: ಬೆಳ್ತಂಗಡಿಯ ಶಾಸಕರಾಗಿರುವ ಹರೀಶ್‌ ಪೂಂಜಾ ಅವರ ಮೇಲೆ ದಾಳಿಗೆ ಪ್ರಯತ್ನಿಸಿದ ಘಟನೆಯು ಅ. 13ರ ರಾತ್ರಿ ಸುಮಾರು 11.30 ಗಂಟೆಯ ಸಮಯದಲ್ಲಿ ನಡೆದಿದೆ. ಶಾಸಕರು ರಾತ್ರಿ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಯತ್ತ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಮಂಗಳೂರು ನಗರದ ಹೊರವಲಯದ ಫರಂಗಿಪೇಟೆಯ ಸಮೀಪ ಸ್ಕಾರ್ಪಿಯೋ ಕಾರ್‌ ನಲ್ಲಿ ಬಂದಂತಹ ದುಷ್ಕರ್ಮಿಗಳ ತಂಡ ಶಾಸಕರ ಕಾರನ್ನು ಅಡ್ಡಗಟ್ಟಿ ದಾಳಿ ಮಾಡಲು ಯತ್ನಿಸಿದೆ ಎಂದು ತಿಳಿದು ಬಂದಿದೆ.


ಶಾಸಕ ಹರೀಶ್ ಪೂಂಜಾ ಅವರು ತಮ್ಮ ಕಾರನ್ನು ಬಿಟ್ಟು ಸಂಬಂಧಿಕರೊಬ್ಬರ ಕಾರಿನಲ್ಲಿ ತೆರಳುತ್ತಿದ್ದರು. ಶಾಸಕರ ಅಧಿಕೃತ ಕಾರು ಆ ಕಾರನ್ನು ಹಿಂಬಾಲಿಸುತ್ತಾ ಸಾಗುತ್ತಿತ್ತು. ಹರೀಶ್ ಪೂಂಜಾ ಅವರ ಅಧಿಕೃತ ವಾಹನ ಚಾಲಕ ಶಾಸಕರ ಕಾರನ್ನು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಅದೇ ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ, ತಲವಾರನ್ನು ಝಳಪಿಸಿ ದುಷ್ಕರ್ಮಿಗಳು ಕಾಲ್ಕಿತ್ತಿದ್ದಾರೆ.


ಶಾಸಕ ಪೂಂಜಾ ಅವರ ಕಾರು ಚಾಲಕ ನವೀನ್, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top