ಭಯೋತ್ಪಾದನೆ ನಿಧಿ ಪ್ರಕರಣ: ಜಮ್ಮು ಕಾಶ್ಮೀರದ 8 ಜಿಲ್ಲೆಗಳಲ್ಲಿ ಎನ್‌ಐಎ ಶೋಧ

Upayuktha
0

ಜಮ್ಮು ಕಾಶ್ಮೀರ: ಇಲ್ಲಿನ ರಜೌರಿ, ಪೂಂಚ್, ಜಮ್ಮು, ಶ್ರೀನಗರ, ಪುಲ್ವಾಮಾ, ಬುದ್ಗಾಮ್, ಶೋಪಿಯಾನ್ ಮತ್ತು ಬಂಡಿಪೋರಾದ ಸ್ಥಳಗಳಲ್ಲಿ ಭಯೋತ್ಪಾದನೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಲಾಗಿದೆ. ಈ ಪ್ರಕರಣವು ರಾಜೌರಿ ಜಿಲ್ಲೆಯ ಅಲ್ ಹುದಾ ಎಜುಕೇಷನಲ್ ಟ್ರಸ್ಟ್‌ನ ಅನುಮಾನಾಸ್ಪದ ಚಟುವಟಿಕೆಗಳಿಗೆ ಸಂಬಂಧಿಸಿದೆ ಎಂದು ಎನ್‌ಐಎ ಮೂಲಗಳು ಎಎನ್‌ಐಗೆ ತಿಳಿಸಿವೆ.


ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಎಂಟು ಜಿಲ್ಲೆಗಳಲ್ಲಿ, ಕೇಂದ್ರಾಡಳಿತ ಪ್ರದೇಶದಲ್ಲಿ ಅಲ್ ಹುದಾ ಎಜುಕೇಷನಲ್ ಟ್ರಸ್ಟ್‌ನ ಅನುಮಾನಾಸ್ಪದ ಚಟುವಟಿಕೆಗಳಿಗೆ ಸಂಬಂಧ ಹೊಂದಿರುವ ಭಯೋತ್ಪಾದಕ ನಿಧಿ ಪ್ರಕರಣ ಕೂಡ ಕುರಿತಂತೆ ಶೋಧ ನಡೆಸಿತು. ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಸಮನ್ವಯದಲ್ಲಿ ಹುಡುಕಾಟ ನಡೆಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.


ಜಮಾತ್-ಎ-ಇಸ್ಲಾಮಿ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಘಟಕವಾಗಿ ಕಾರ್ಯನಿರ್ವಹಿಸುತ್ತಿರುವ ಅಲ್ ಹುದಾ ಎಜುಕೇಷನಲ್ ಟ್ರಸ್ಟ್‌ನ ಹಣಕಾಸಿನ ಮಾದರಿ ಮತ್ತು ಚಟುವಟಿಕೆಗಳ ಬಗ್ಗೆ ಎನ್‌ಐಎ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿದೆ ಎಂದು ವರದಿಯಾಗಿದೆ. ಜಮಾತ್-ಎ-ಇಸ್ಲಾಮಿ ಜಮ್ಮು ಮತ್ತು ಕಾಶ್ಮೀರವನ್ನು 2019 ರಲ್ಲಿ ಯುಎಪಿಎ ಅಡಿಯಲ್ಲಿ 'ಕಾನೂನುಬಾಹಿರ ಸಂಘ' ಎಂದು ಘೋಷಿಸಲಾಗಿತ್ತು.


ಖ್ಯಾತ ಧಾರ್ಮಿಕ ಬೋಧಕ ಮತ್ತು ರೆಕ್ಟರ್ ದಾರುಲ್ ಉಲೂಮ್ ರಹೀಮಿಯಾ ಬಂಡಿಪೋರಾ, ಮೌಲಾನಾ ರೆಹಮ್ತುಲ್ಲಾ ಖಾಸ್ಮಿ ಮತ್ತು ಎನ್‌ಐಟಿ ಶ್ರೀನಗರದ ಪ್ರೊಫೆಸರ್ ಸಮಮ್ ಅಹ್ಮದ್ ಲೋನ್ ಅವರ ನಿವಾಸಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top