ವಿಶ್ವ ಹಿಂದೂ ಪರಿಷತ್ ಕೊಂಚಾಡಿ: ಅ. 24ರಂದು ತುಡರಪರ್ಬ, ಗೂಡುದೀಪ ಸ್ಪರ್ಧೆ

Upayuktha
0

ಕೊಂಚಾಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳದ ದೇರೆಬೈಲ್ ಕೊಂಚಾಡಿ ಶ್ರೀ ರಘುವೀರ್ ಘಟಕದ ವತಿಯಿಂದ ಅಕ್ಟೊಬರ್ 24 ಸೋಮವಾರದಂದು ಸಂಜೆ ಗಂಟೆ 4.00 ರಿಂದ ಕೊಂಚಾಡಿ ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕಾ ದೇವಸ್ಥಾನದ ಆವರಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 'ತುಡರ ಪರ್ಬ 2022' ಏರ್ಪಡಿಸಲಾಗುವುದು.


ಇದೇ ಸಂದರ್ಭದಲ್ಲಿ ಸಾರ್ವಜನಿಕ ಗೊಪೂಜೆ ಹಾಗೂ ಗೂಡುದೀಪ ಸ್ಪರ್ಧೆಗಳನ್ನು ಆಯೋಜಸಲಾಗಿದೆ.


ಸಂಪ್ರದಾಯಿಕ ಹಾಗೂ ಆಧುನಿಕ ವಿಭಾಗಗಳಲ್ಲಿ ಗೂಡುದೀಪ ಸ್ಪರ್ಧೆ ವ್ಯವಸ್ಥೆ ಮಾಡಲಾಗಿದ್ದು ಭಾಗವಹಿಸುವವರು ತಮ್ಮ ರಚನೆಯ ಗೂಡುದೀಪವನ್ನು ಪ್ರದರ್ಶಿಸಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಆಸಕ್ತರು 8073429580 ಅಥವಾ 9480486552 ಸಂಖ್ಯೆಗೆ ಕರೆಮಾಡಿ ಹೆಚ್ಚಿನ ಮಾಹಿತಿ ಪಡೆದು ಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ. ಸ್ಪರ್ಧೆಯ ನಂತರ ನಡೆಯುವ ಸಭಾಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು. ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ವೈ. ಭರತ್ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top