ಬದಿಯಡ್ಕ: ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ ಅಕ್ಟೋಬರ್ 21 ಶುಕ್ರವಾರ ಮತ್ತು 22 ಶನಿವಾರಗಳಂದು ಕುಂಬಳೆ ಉಪಜಿಲ್ಲಾ ಮಟ್ಟದ 'ವಿಜ್ಞಾನೋತ್ಸವ' ಕಾರ್ಯಕ್ರಮ ಜರುಗಲಿದೆ. ಅಕ್ಟೋಬರ್ 21 ರಂದು ಸಮಾಜ ವಿಜ್ಞಾನ, ಗಣಿತ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸ್ಪರ್ಧೆಗಳು, 22 ರಂದು ವಿಜ್ಞಾನ ಮತ್ತು ವೃತ್ತಿಪರಿಚಯಕ್ಕೆ ಸಂಬಂಧಿಸಿದ ಸ್ಪರ್ಧೆಗಳು ಜರಗಲಿವೆ.
ಕಾರ್ಯಕ್ರಮದಲ್ಲಿ ಕುಂಬಳೆ ಉಪಜಿಲ್ಲೆಯ ವಿವಿಧ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸ್ಪರ್ಧೆಗಳು ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಹೈಯರ್ ಸೆಕೆಂಡರಿ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ನಡೆಯಲಿದೆ.
ಅಕ್ಟೋಬರ್ 21, ಶುಕ್ರವಾರದಂದು ಬೆಳಗ್ಗೆ 9 ಗಂಟೆಗೆ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆಯವರು ಧ್ವಜಾರೋಹಣ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾಂತಾ ಬಿ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಎ. ನೆಲ್ಲಿಕುನ್ನು ನೆರವೇರಿಸಲಿದ್ದಾರೆ.
ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಎಂ.ಶೈಲಜಾ ಭಟ್, ಕಾಸರಗೋಡು ಕಂದಾಯ ಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಮತಿ ಪುಷ್ಪಾ ಕೆ.ವಿ, ಡಯಟ್ ಕಾಸರಗೋಡಿನ ಪ್ರಾಂಶುಪಾಲ ಕೆ.ರಘುರಾಮ ಭಟ್, ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿ ಎನ್.ನಂದಿಕೇಶನ್, 'ಕೈಟ್' ಜಿಲ್ಲಾ ವ್ಯವಸ್ಥಾಪಕ ರಾಜೇಶ್ ಎಂ.ಪಿ, ಬದಿಯಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಎಂ, ಬದಿಯಡ್ಕ ಗ್ರಾಮ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ರಶೀದಾ ಹಮೀದ್, ಕಾಸರಗೋಡು ಬ್ಲೋಕ್ ಪಂಚಾಯತ್ ಸದಸ್ಯೆ ಶ್ರೀಮತಿ ಜಯಂತಿ, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಜಯಶ್ರೀ ಪಿ, ಕುಂಬಳೆ ಬಿಪಿಸಿ ಜಯರಾಮ್ ಜೆ, ಬದಿಯಡ್ಕ ಗ್ರಾಮ ಪಂಚಾಯತು ಪಿಇಸಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆ, ಕುಂಬಳೆ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘಟನೆಯ ಸಂಚಾಲಕ ವಿಷ್ಣುಪಾಲ ಬಿ, ಕುಂಬಳೆ ಉಪಜಿಲ್ಲಾ ಏಕ್ಟಿವಿಟಿ ಕಮಿಟಿಯ ಸಂಚಾಲಕ ಸುರೇಂದ್ರನ್ ಎಂ.ವಿ, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾಲತಿ.ವೈ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಎಸ್.ನಾರಾಯಣ ಮತ್ತು ಮೋಹನ್ ಡಿ.ಎನ್ ಕಾರ್ಯಕ್ರಮಕ್ಕೆ ಶುಭಹಾರೈಸಲಿದ್ದಾರೆ. ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಯತೀಶ್ ಕುಮಾರ್ ರೈ ಸ್ವಾಗತಿಸಿ, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯ ಶಿವಪ್ರಕಾಶ್ ಎಂ.ಕೆ ಧನ್ಯವಾದ ಸಮರ್ಪಿಸಲಿದ್ದಾರೆ.
ಅ. 22, ಶನಿವಾರ ಅಪರಾಹ್ನ 3 ಗಂಟೆಗೆ ಜರಗಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಯತೀಶ್ ಕುಮಾರ್ ರೈ ವಹಿಸಲಿದ್ದಾರೆ. ಬದಿಯಡ್ಕ ಪೋಲೀಸ್ ಇನ್‌ಸ್ಪೆಕ್ಟರ್ ಅಶ್ವಿತ್ ಎಸ್. ಕರಣ್ಮಯಿಲ್, ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕದ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಭಟ್, ಶಾಲಾ ರಕ್ಷಕ ಶಿಕ್ಷಕ ಸಂಘದ ಮಾತೃ ವಿಭಾಗದ ಅಧ್ಯಕ್ಷರುಗಳಾದ ಗಿರಿಜಾ ಮತ್ತು ಸಿಂಧು ಟಿ ಬಹುಮಾನಗಳನ್ನು ವಿತರಿಸಲಿದ್ದಾರೆ. ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಪ್ರಭಾರ ಪ್ರಾಂಶುಪಾಲ ಎಂ. ಸುಬ್ರಹ್ಮಣ್ಯನ್ ಸ್ವಾಗತಿಸಿ, ಪ್ರೋಗ್ರಾಂ ಕಮಿಟಿಯ ಸಂಚಾಲಕ ಕೆ. ಗೋವಿಂದ ಶರ್ಮ ಧನ್ಯವಾದ ಸಮರ್ಪಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ