ಪುತ್ತೂರು: ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (ಎನ್.ಎ.ಟಿ.ಎ - ನಾಟಾ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮೆರೆದಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ಘಟಕದ ಸಂಚಾರ ನಿಯಂತ್ರಕರಾದ ಉಮೇಶ್ ಎನ್ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿ ರತ್ನಾವತಿ ಬಿ ದಂಪತಿ ಪುತ್ರಿ ವೃಂದಾ ಯುಎನ್ ನಾಟಾ ಪರೀಕ್ಷೆಯಲ್ಲಿ 198 ನೇ ರ‍್ಯಾಂಕ್ ಗಳಿಸಿದ್ದಾರೆ. ಹಾಗೆಯೇ ಚೈತನ್ಯ ಎಸ್ (ಬಂಟ್ವಾಳದ ನೇರಳಕಟ್ಟೆಯ ಈಶ್ವರ ನಾಯ್ಕ ಎಸ್ ಮತ್ತು ಗೀತಾ ಜಿ ದಂಪತಿ ಪುತ್ರಿ) 230 ನೇ ರ‍್ಯಾಂಕ್ ಗಳಿಸಿದ್ದಾರೆ. ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ