ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ವಿಕಲಚೇತನರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಅ.13ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶೋಭ ಬಿ.ಜಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅಥಿತಿಗಳಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ವೆನ್‍ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಮತ್ತು ಅಧೀಕ್ಷಕ ಡಾ. ಸದಾಶಿವ ಶಾನುಭೋಗ್, ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ.ಆರ್, ಮಹಿಳಾ ಮತ್ತು ಮಕ್ಕಳ ಅಬಿವೃಧ್ಧಿ ಇಲಾಖೆಯ ಉಪನಿರ್ದೇಶಕ ಪಾಪಭೋವಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಮಾನಸಿಕ ರೋಗ ತಜ್ಞರಾದ ಡಾ. ಸುಪ್ರೀತ, ವಕೀಲರಾದ ಶುಕರಾಜ್ ಎಸ್. ಕೊಟ್ಟಾರಿ ಹಾಗೂ ಡಾ. ವಿನಯ್‍ಭಟ್ ಭಾಗವಹಿಸುವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ