ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪ.ಜಾತಿ ಅಥವಾ ಪ.ಪಂಗಡ ವರ್ಗಕ್ಕೆ ಸೇರಿದ ಕಲಾವಿದರಾಗಿರಬೇಕು. ಮತ್ತು ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಒಬ್ಬರು ಮಹಿಳೆ ಹಾಗೂ ಒಬ್ಬರು ಪ.ಜಾತಿ ಅಥವಾ ಪ.ಪಂಗಡ ವರ್ಗಕ್ಕೆ ಸೇರಿದವರಾಗಿರಬೇಕು.
ಆಸಕ್ತ ಕಲಾತಂಡಗಳು 2022ರ ಅಕ್ಟೋಬರ್ 15ರೊಳಗೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, 2ನೇ ಮಹಡಿ, ಪಿ.ಡಬ್ಲ್ಯೂಡಿ ಕಟ್ಟಡ, ಮೈದಾನ್ ರಸ್ತೆ, ಹಂಪನಕಟ್ಟೆ, ದ.ಕ, ಮಂಗಳೂರು-575001 ಇಲ್ಲಿಗೆ ಸಲ್ಲಿಸಬೇಕು ಎಂದು ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.