ವಿಕಲಚೇತನರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Upayuktha
0

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಹಾಗೂ ಸಲ್ಲಿಸಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dwdsc.kar.nic.in ಅಥವಾ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಚೇರಿ ರಜತಾದ್ರಿ - ಮಣಿಪಾಲ, ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top