ಯೋಗ ವಯಸ್ಸಿನ ಬೇಧವಿಲ್ಲದೆ ಎಲ್ಲರಿಗೂ ಲಾಭದಾಯಕ: ಡಾ.ಅನಸೂಯ ರೈ

Upayuktha
0

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಯೋಗ ವಿಜ್ಞಾನದಲ್ಲಿ ಒಂದು ವರ್ಷದ ಪಿಜಿ ಡಿಪ್ಲೊಮಾ ಕಾರ್ಯಕ್ರಮ ಮುಗಿಸಿದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಸೋಮವಾರ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ.ಅನಸೂಯ ರೈ ಮಾತನಾಡಿ, ಮಹತ್ವಾಕಾಂಕ್ಷೆಯೊಂದಿಗೆ ಆರಂಭಿಸಿದ ಕಾಲೇಜಿನ ಯೋಗ ವಿಜ್ಞಾನ ವಿಭಾಗ ನಿರೀಕ್ಷೆಯಂತೆಯೇ ವಯಸ್ಸಿನ ಬೇಧವಿಲ್ಲದೆ ಎಲ್ಲರಿಗೂ ಸಹಾಯಕವಾಗಿದೆ. ಉತ್ತಮ ದೈಹಿಕ, ಮಾನಸಿಕ ಆರೋಗ್ಯಕ್ಕೆ ನೆರವಾಗುವ ಯೋಗವನ್ನು ಪ್ರಾಧ್ಯಾಪಕರು ಯಶಸ್ವಿಯಾಗಿ ಕಲಿಸುತ್ತಿರುವುದು ಸಂತೋಷದ ವಿಚಾರ ಎಂದರು.


ವಿಭಾಗದ ಸಂಯೋಜಕ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕೇಶವಮೂರ್ತಿ ಮಾತನಾಡಿ, ಯೋಗ ಕಲಿತವರಿಗೆ ಉದ್ಯೋಗಾವಕಾಶಗಳು ಹೆಚ್ಚುತ್ತಿವೆ. ಪಿಜಿ ಡಿಪ್ಲೊಮಾ ಕೋರ್ಸ್‌ನ ಲಾಭ ಪಡೆದವರು ಇನ್ನಷ್ಟು ಜನರಿಗೆ ಅದರ ಮಹತ್ವ ತಿಳಿಸಬೇಕೆಂದು ಮನವಿ ಮಾಡಿಕೊಂಡರು.


'ಪತಂಜಲಿ ನಮನ' ದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ, ಯೋಗ ಮುಖ್ಯಸ್ಥ ಡಾ. ಅಜಿತೇಶ್‌ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯಶಸ್ವಿಯಾಗಿ ಪಿಜಿ ಡಿಪ್ಲೊಮಾ ಮುಗಿಸಿದ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು. ವಿಭಾಗದ ಡಾ. ರಂಗಪ್ಪ, ಉಮಾನಾಥ್‌ ಮೊದಲಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top