
ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಂಚಾರಿ ನೇತ್ರ ಘಟಕದ ವತಿಯಿಂದ ಜಿಲ್ಲೆಯ ವಿವಿಧೆಡೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ವಿವರ ಇಂತಿದೆ:
ಅ.11ರ ಮಂಗಳವಾರ ಬೆಳಿಗ್ಗೆ 8.30ಕ್ಕೆ ಬಂಟ್ವಾಳ ತಾಲೂಕಿನ ವಾಮದಪದವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಅ.14ರ ಶುಕ್ರವಾರ ಬೆಳಿಗ್ಗೆ 8.30ಕ್ಕೆ ಮುಲ್ಕಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಅ.18ರ ಮಂಗಳವಾರ ಬೆಳಿಗ್ಗೆ 8ಗಂಟೆಗೆ ವಿಟ್ಲದ ಒಕ್ಕಲಿಗರ ಸಭಾ ಭವನದಲ್ಲಿ ನೇತ್ರ ತಪಾಸಣಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ