ಮಂಗಳೂರು ತಾಲೂಕು ಕನ್ನಡ ಸಮ್ಮೇಳನಕ್ಕೆ ನಾ.ದಾಮೋದರ ಶೆಟ್ಟಿ ಸರ್ವಾಧ್ಯಕ್ಷರಾಗಿ ಆಯ್ಕೆ

Chandrashekhara Kulamarva
0

                                                     

ಮಂಗಳೂರು:  ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಇದರ ೨೨ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ  ನಗರದ ಕೊಡಿಯಲ್‌ಬೈಲ್‌ನ ಶಾರದಾ ವಿದ್ಯಾಲಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ರಂಗಕರ್ಮಿ ಶ್ರೀ ಡಾ. ನಾ.ದಾಮೋದರ ಶೆಟ್ಟಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಇದರ ಅಧ್ಯಕ್ಷ ಮಂಜುನಾಥ್ ಎಸ್.ರೇವಣಕರ್,  ಗೌರವ ಕಾರ್ಯದರ್ಶಿ ಡಾ. ಮುರಲೀ ಮೋಹನ್ ಚೂಂತಾರು, ಗಣೇಶ್ ಪ್ರಸಾದ್‌, ಕೋಶಾಧಿಕಾರಿ  ಸುಬ್ರಾಯ ಭಟ್ ಮತ್ತು ಇತರ ಕಾರ್ಯಕಾರಣಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಸಮ್ಮೇಳನವು  ಅಕ್ಟೋಬರ್ 30 ರಂದು ನಗರದ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಯಲಿದೆ.


إرسال تعليق

0 تعليقات
إرسال تعليق (0)
To Top