ಜಾನುವಾರು ಚರ್ಮಗಂಟು ರೋಗಕ್ಕೆ ಮುನ್ನೆಚ್ಚರಿಕಾ ಕ್ರಮ ಅಗತ್ಯ: ಸುಚರಿತ ಶೆಟ್ಟಿ

Upayuktha
0

ಮಂಗಳೂರು: ಜಿಲ್ಲೆಯಲ್ಲಿ ಜಾನುವಾರಗಳಿಗೆ ಬರುವ ಚರ್ಮಗಂಟು ರೋಗದ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಸುಚರಿತ ಶೆಟ್ಟಿ ತಿಳಿಸಿದರು.


ಅವರು ಅ.15ರ ಭಾನುವಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಜಿಲ್ಲಾ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಜಂಟಿ ಆಶ್ರಯದೊಂದಿಗೆ ನಗರದ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಕಚೇರಿಯಲ್ಲಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಅಧಿಕಾರಿಗಳು ಜಿಲ್ಲೆಯಲ್ಲಿರುವ ಜಾನುವಾರಗಳಿಗೆ ಬರುವ ಚರ್ಮಗಂಟು ರೋಗದ ಬಗ್ಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಹಾಗೂ ಅಗತ್ಯವಿರುವ ಲಸಿಕೆ ಮತ್ತು ಔಷಧಿಗಳನ್ನು ಒಕ್ಕೂಟದಿಂದ ಪೂರೈಸುವ ಬಗ್ಗೆ ಭರವಸೆ ನೀಡಿದರು.


ಪಶು ಪಾಲನಾ ಇಲಾಖೆ ಉಪನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ಸಾರ್ವಜನಿಕರು ಹಾಗೂ ಹೈನುಗಾರರು ಭಯ ಪಡುವ ಅಗತ್ಯವಿಲ್ಲ. ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ಒಂದು ಶಂಕಿತ ಪ್ರಕರಣ ದಾಖಲಾಗಿದ್ದು ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈಗಾಗಲೇ ಆ ಗ್ರಾಮದ ಸುತ್ತಮುತ್ತಲಿನ 600 ಜಾನುವಾರುಗಳಿಗೆ ಹಾಗೂ ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಒಟ್ಟು 2000 ಡೋಸ್ ಲಸಿಕೆ ಹಾಕಲಾಗಿದೆ ಎಂದರು.


ರೋಗ ಹರಡಲು ಕಾರಣವಾಗುವ ಸೊಳ್ಳೆ, ನೊಣ ಹಾಗೂ ಉಣ್ಣೆ ನೀಯಂತ್ರಣಕ್ಕಾಗಿದೆ ಫಾಗಿಂಗ್ ಹಾಗೂ ಕ್ರಿಮಿ ನಾಶಕ ಸಿಂಪಡಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಡಾ.ನಿತ್ಯಾನಂದ, ಜಿಲ್ಲಾ ಪಶುಪಾಲನ ಇಲಾಖೆ ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top