ಆಳ್ವಾಸ್‌ನಲ್ಲಿ ಮೊಳಗಿತು ಕೋಟಿ ಕಂಠ ಗಾಯನ; 20 ಸಾವಿರಕ್ಕೂ ಅಧಿಕ ಮಂದಿ ಭಾಗಿ

Upayuktha
0

ಮೂಡುಬಿದಿರೆ: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕೋಟಿ ಕಂಠ ಗಾಯನ ‘ನನ್ನ ನಾಡು ನನ್ನ ಹಾಡು’ ಕಾರ‍್ಯಕ್ರಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಏಕಕಾಲದಲ್ಲಿ 8 ಕಡೆಗಳಲ್ಲಿ 20 ಸಾವಿರಕ್ಕೂ ಅಧಿಕ ಜನಸಮೂಹದಿಂದ ಕನ್ನಡ ಗಾಯನ ಮೊಳಗಿತು.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪದವಿಪೂರ್ವ ಹಾಗೂ ಪದವಿ ಕಾಲೇಜಿನಿಂದ 12076, ಆಯುರ್ವೇದ, ನ್ಯಾಚುರೋಪತಿ, ಇಂಜಿನಿಯರಿಂಗ್ ಹಾಗೂ ಹೋಮಿಯೋಪಥಿಯಿಂದ 4234, ಆಳ್ವಾಸ್ ಸಿಬಿಎಸ್‌ಇ, ಸ್ಟೇಟ್ ಹಾಗೂ ಕನ್ನಡ ಮಾಧ್ಯಮ ಶಾಲೆಯಿಂದ 3500, ನರ್ಸಿಂಗ್ ಕಾಲೇಜಿನಿಂದ 400 ಜನರು ಪಾಲ್ಗೊಂಡರು.


ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ’ ಹಾಗೂ ‘ಬಾರಿಸು ಕನ್ನಡ ಡಿಂಡಿಮಮ’, ಹುಯಿಲಗೋಳ ನಾರಾಯಣರಾವ್ ವಿರಚಿತ ‘ಉದಯವಾಗಲಿ ನಮ್ಮ ಚಲುವ ಕನ್ನಡನಾಡು’, ಚನ್ನವೀರ ಕಣವಿ ಅವರ ‘ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ’, ಡಾ ಡಿ.ಎಸ್ ಕರ್ಕಿ ಅವರ ‘ಹಚ್ಚೇವು ಕನ್ನಡದ ದೀಪ’, ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡಲಾಯಿತು.


ನೆರೆದಿರುವರೆಲ್ಲರಿಗೂ ಸಂಕಲ್ಪವಿಧಿಯನ್ನು ಭೋದಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎಲ್ಲಾ ಕಾಲೇಜುಗಳ ಪ್ರಾಚಾರ‍್ಯರು, ಬೋಧಕ ವರ್ಗ ಹಾಗೂ ಬೋಧಕೇತರವರ್ಗದವರು ಕಾರ‍್ಯಕ್ರಮದಲ್ಲಿ ಪಾಲ್ಗೊಂಡರು. ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೊಪಾಲ ಶೆಟ್ಟಿ ಕಾರ‍್ಯಕ್ರಮವನ್ನು ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top