ಪುತ್ತೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಯೋಗ ದಸರಾ ಉಪಸಮಿತಿ ಆಯೋಜಿಸಿದ ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಇವರು ಪುತ್ತೂರಿನ ನೆಹರೂನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.