ಮಂಗಳೂರು: ನಗರದ ಕದ್ರಿಯಲ್ಲಿರುವ ಬಾಲವನದಲ್ಲಿ ನವೆಂಬರ್ 01 ರಂದು ನಡೆಯುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಧ್ಯಾಹ್ನ 2 ಗಂಟೆಗೆ 5 ರಿಂದ 8 , 9 ರಿಂದ 12, ಹಾಗೂ 13 ರಿಂದ 16 ವರ್ಷದ ಮಕ್ಕಳಿಗೆ ಕನ್ನಡ ಗೀತೆ ಸ್ಪರ್ಧೆ ಏರ್ಪಡಿಸಲಾಗಿದ್ದು ಆಸಕ್ತರು ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಅಥವಾ ದೂ.ಸಂ: 0824-2451254 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ


