ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಗಾಯನ ಸ್ಪರ್ಧೆ

Chandrashekhara Kulamarva
0

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲೆಯ 5 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ನವೆಂಬರ್ 1 ರಂದು ಮಧ್ಯಾಹ್ನ 1.30 ಕ್ಕೆ ನಗರದ ಬ್ರಹ್ಮಗಿರಿ ಜಿಲ್ಲಾ ಬಾಲಭವನದಲ್ಲಿ ಕನ್ನಡ ಗಾಯನ ಸ್ಪರ್ಧೆ ನಡೆಯಲಿದೆ.


ಸ್ಪರ್ಧೆಯಲ್ಲಿ ಕನ್ನಡ ನಾಡಿನ ಕವಿ, ಸಾಹಿತಿಗಳಿಂದ ರಚಿಸಲ್ಪಟ್ಟ ಕನ್ನಡ ನಾಡಿಗೆ ಸಂಬಂಧಿಸಿದ ಸುಗಮ ಸಂಗೀತ ಹಾಗೂ ಸಿನಿಮಾ ಗೀತೆಗಳನ್ನು ಹಾಡಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top