ಪುತ್ತೂರು: ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಆಯೋಜಿಸಲಾದ ರಾಜ್ಯ ದಸರಾ ಕ್ರೀಡಾಕೂಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೀಪ್ತಿ ಲಕ್ಷ್ಮಿ ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಈಕೆ ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆಯ ಶಂಕರ ಪ್ರಸಾದ್ ಕೆ ಮತ್ತು ಉಷಾ ದಂಪತಿ ಪುತ್ರಿ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಈಕೆ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ