ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಸ್ವಾಮಿ ಮಂಗಳನಾಥಾನಂದಾಜಿ ಭೇಟಿ

Upayuktha
0

 

ಪುತ್ತೂರು: ಬೆಂಗಳೂರಿನ ಶಿವನಹಳ್ಳಿಯ ರಾಮಕೃಷ್ಣ ಮಠದ ಸ್ವಾಮಿ ಮಂಗಳನಾಥಾನಂದಾಜಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಸ್ವಾಮೀಜಿಯವರು ಕಾಲೇಜು ಆವರಣವನ್ನು ಸಂದರ್ಶಿಸಿ ಕಾಲೇಜು ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿನ್ನಲೆ ಹಾಗೂ ಕಾಲೇಜಿನ ಹಿನ್ನಲೆ, ಸೌಲಭ್ಯಗಳು ಹಾಗೂ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.


ಪೂಜ್ಯರು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವಾಮೀಜಿಯವರು ನಂತರ ವಿವೇಕಾನಂದ ಪತ್ರಿಕೋದ್ಯಮ ವಿಭಾಗದ ವಿಕಸನ ಮಲ್ಟಿಮೀಡಿಯಾ ಸ್ಟುಡಿಯೋ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಪಾಂಚಜನ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿವಿಧ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕ - ಪ್ರಾಧ್ಯಾಪಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top