ಮಾಸ್ಕೋದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಬೆದರಿಕೆ; ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

Upayuktha
0

ಹೊಸದಿಲ್ಲಿ: ಮಾಸ್ಕೋದಿಂದ ದಿಲ್ಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್‌ ಇಡಲಾಗಿದೆ ಎಂಬ ಎಚ್ಚರಿಕೆಯನ್ನು ಹೊಂದಿದ್ದ ಒಂದು ಮಾಹಿತಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ರಾತ್ರಿ ಬಂದಿರುವುದಾಗಿ ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆದರಿಕೆಯ ಮೇಲ್ ಬಂದ ಬಳಿಕ ಭದ್ರತಾ ಏಜೆನ್ಸಿಗಳನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ವಿಮಾನ ನಿಲ್ದಾಣ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.


ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನವನ್ನು ಪರಿಶೀಲನೆ ಮಾಡಲಾಗಿದೆ. ಆದರೆ ಈವರೆಗೂ ಯಾವುದೇ ರೀತಿಯ ಅಪಾಯದ ಮುನ್ಸೂಚನೆ ಕಂಡುಬಂದಿಲ್ಲ. ಹೀಗಿದ್ದರೂ ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಾಸ್ಕೋದಿಂದ ದೆಹಲಿಯತ್ತ ಹೊರಟ ವಿಮಾನವು ಮುಂಜಾನೆ 3:20ಕ್ಕೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಆ ವಿಮಾನದಲ್ಲಿ ಒಟ್ಟು 386 ಪ್ರಯಾಣಿಕರು ಮತ್ತು 16 ಸಿಬ್ಬಂದಿಗಳಿದ್ದು ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.


3:20ಕ್ಕೆ ಮಾಸ್ಕೋದಿಂದ ಟರ್ಮಿನಲ್ 3 ಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಮಾಹಿತಿ ರಾತ್ರಿ 11:15ಕ್ಕೆ ಬಂದಿತ್ತು. ವಿಮಾನ ಸಂಖ್ಯೆ SU232, ರನ್ ವೇ 29 ರಲ್ಲಿ ಇಳಿಯಿತು. ಎಂಬುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ ಈ ಹಿಂದೆಯೂ ಇದೇ ರೀತಿಯ ಘಟನೆ ಸಂಭವಿಸಿತ್ತು. ಸೆಪ್ಟೆಂಬರ್ 10 ರಂದು, ಲಂಡನ್‌ ಗೆ ಹೋಗುವ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆಯನ್ನು ಮಾಡಲಾಗಿತ್ತು. ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿ ಪ್ರಯಾಣಿಕರಲ್ಲಿ ಭಯ ಉಂಟು ಮಾಡುವ ಕಿಡಿಗೇಡಿಗಳನ್ನು ಬಂಧಿಸಲು ಪೊಲೀಸರು ಪ್ರಯತ್ನ ಮುಂದುವರಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top