ನಾಳೆ 23ನೇ ವಿಶ್ವ ದೃಷ್ಟಿ ದಿನಾಚರಣೆ

Upayuktha
0

                                                                

ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಮತ್ತು ವಿಕಲಚೇತನರ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಅ.13ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ 23ನೇ ವಿಶ್ವ ದೃಷ್ಟಿ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ..

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅಥಿತಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ವೆನ್‍ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಮತ್ತು ಅಧೀಕ್ಷಕ ಡಾ. ಸದಾಶಿವ ಶಾನುಭೋಗ್, ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ . ದುರ್ಗಾಪ್ರಸಾದ್ ಎಂ.ಆರ್, ಮಹಿಳಾ ಮತ್ತು ಮಕ್ಕಳ ಅಬಿವೃಧ್ಧಿ ಇಲಾಖೆಯ ಉಪನಿರ್ದೇಶಕ ಪಾಪಭೋವಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ ಹಾಗೂ ವೆನ್‍ಲಾಕ್ ಆಸ್ಪತ್ರೆಯ ಹಿರಿಯ ನೇತ್ರ ತಜ್ಞ  ಡಾ. ಸೌಮ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
To Top