ಕನ್ನಡಕ್ಕೆ ಮಿರ್ಜಾ ಇಸ್ಮಾಯಿಲ್‌ರ ಕೊಡುಗೆ ಅನನ್ಯ: ಡಾ. ಪುಂಡಿಕಾಯ್ ಗಣಪಯ್ಯ ಭಟ್

Upayuktha
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಡಾ. ಪಿ. ದಯಾನಂದ ಪೈ, ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ, ಇವರ ಜಂಟಿ ಆಶ್ರಯದಲ್ಲಿ ಸರ್ ಮಿರ್ಜಾ ಇಸ್ಮಾಯಿಲ್ ಅವರ 137ನೇ ಜನ್ಮ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.


ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಅವರು, ವಿದ್ಯಾರ್ಥಿಗಳು ಮತ್ತು ಕನ್ನಡ ಸಾಹಿತ್ಯ ಪರಿಷತ್‌ನ ನಡುವೆ ಸಂಬಂಧ ಬೆಸೆಯಲು ಇಂತಹ ಕಾರ್ಯಕ್ರಮಗಳ ಅಗತ್ಯವಿದೆ, ಎಂದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಹಿರಿಯ ವಿದ್ವಾಂಸ ಡಾ. ಪುಂಡಿಕಾಯ್ ಗಣಪಯ್ಯ ಭಟ್ ಇವರು, ಸರ್ ಮಿರ್ಜಾ ಇಸ್ಮಾಯಿಲ್ ದಿವಾನರಾಗಿ ನಾಡಿಗೆ ಹಾಗೂ ಕನ್ನಡ ನುಡಿಗೆ ನೀಡಿರುವ ಕೊಡುಗೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಮಾತನಾಡಿ, ಪ್ರತಿಯೊಂದು ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಆಸಕ್ತಿ ಹೆಚ್ಚುತ್ತದೆ ಎಂದರು.


ಡಾ. ರವಿಕುಮಾರ ಎಂ.ಪಿ., ಡಾ. ನಾಗವೇಣಿ ಮಂಚಿ, ಡಾ. ಜ್ಯೋತಿಪ್ರಿಯಾ, ರಾಜೇಶ್ವರಿ ಎಂ, ಡಾ. ಮಾಧವ ಮೂಡುಕೊಣಾಜೆ, ಡಾ. ಚಿನ್ನಸ್ವಾಮಿ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಡಾ. ವಿನೋದ ಸ್ವಾಗತಿಸಿ, ಸಂತೋಷ್ ಬಿ.ಎಂ ಧನ್ಯವಾದ ಸಲ್ಲಿಸಿದರು. ರಮ್ಯ ಆರ್. ಮತ್ತು ತಂಡದವರು ಪ್ರಾರ್ಥನೆ ಹಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top