ವಿವಿ ಕಾಲೇಜು ಮಂಗಳೂರು: 69ನೇ ಅಖಿಲ ಭಾರತ ಸಹಕಾರ ಸಪ್ತಾಹ, ವಿಚಾರ ಸಂಕಿರಣ

Upayuktha
0

ಸಹಕಾರಿ ಕ್ಷೇತ್ರದ ಬಗ್ಗೆ ಅರಿವು ಅಗತ್ಯ: ಡಾ.ಅನಸೂಯ ರೈ


ಮಂಗಳೂರು:  ಸಹಕಾರಿ ಕ್ಷೇತ್ರದ ಹುಟ್ಟು, ಬೆಳವಣಿಗೆ ಬಗ್ಗೆ ನಾವು ಅರಿವು ಮೂಡಿಸಿಕೊಳ್ಳಬೇಕು. ಅತಿ ಸೂಕ್ಷ್ಮ ವಿಷಯಗಳನ್ನು ನಾವು ಕ್ರಿಯಾಶೀಲರಾಗಿ ಕೇಳಿಸಿಕೊಳ್ಳಬೇಕು. ಸಹಕಾರಿ ಕ್ಷೇತ್ರದ ಹುಟ್ಟಿನಿಂದ ಇಲ್ಲಿಯವರೆಗೂ ಇದರ ಪಯಣ, ಸಾಧನೆ ಅಪ್ರತಿಮವಾದುದು, ಎಂದು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ಅಭಿಪ್ರಾಯಪಟ್ಟರು.


ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೋಜನಾ ವೇದಿಕೆ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ – 2022 ರ ಆಚರಣೆಯ ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಮುಖ್ಯ ಅತಿಥಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್‌ ,ಮಂಗಳೂರು ಇದರ ನಿರ್ದೇಶಕ ಡಾ.ಹರೀಶ್ ಆಚಾರ್ಯ ಮಾತನಾಡಿ, ಜಾರಿ, ಧರ್ಮ, ರಾಜಕೀಯ ನಿಲುವುಗಳು, ಲಿಂಗ ಭಿನ್ನತೆಯನ್ನು ಮೀರಿ ಸಹಕಾರಿ ತತ್ವ ಎಲ್ಲಾ ಕ್ಷೇತ್ರಗಳಲ್ಲಿಯೂ ಬೆಳೆಯುತ್ತಿದೆ. ಹುಟ್ಟಿನಿಂದ ಚಟ್ಟದವರೆಗೆ ಎಂಬ ಮಾತಿನಂತೆ,ಎಲ್ಲಾ ವಿಭಾಗದಲ್ಲೂ ಸಹಾಯಹಸ್ತ ಚಾಚುತ್ತ ಕಾರ್ಯನಿರ್ವಹಿಸುತ್ತಿದೆ. ಯುವ ಜನರ ಪಾಲ್ಗೊಳ್ಳುವಿಕೆಯ ಮೂಲಕ ಮುಂದಿನ ಜನಾಂಗಕ್ಕೆ ಸಹಕಾರಿ ತತ್ವವನ್ನು ದಾಟಿಸುವ ಪ್ರಯತ್ನ ನಡೆದಿದೆ, ಎಂದರು.


ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ, ಮಂಗಳೂರು ಇದರ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ಸಹಕಾರಿ ಇಲಾಖೆಯ, ಅಧೀಕ್ಷಕ ಎನ್.ಜೆ.ಗೋಪಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಹಕಾರಿ ಸಂಘದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್‌ ನಿರ್ದೇಶಕರಾದ ವಿನಯ್ ಕುಮಾರ್ ಸೂರಿಂಜೆ, ಚಿತ್ತರಂಜನ್ ಬೋಳಾರ್, ಅನುಪಮಾ ಎ.ರಾವ್, ಕಾಲೇಜಿನ ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಸುರೇಶ್, ಡಾ.ಗಾಯತ್ರಿ ಎನ್ ಉಪಸ್ಥಿತರಿದ್ದರು.


ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ಲಿ ಮಂಗಳೂರು ಇದರ ನಿರ್ದೇಶಕಿ ಸಾವಿತ್ರಿ ರೈ. ಕೆ ಕಾರ್ಯಕ್ರಮ ನಿರ್ವಹಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾಲೇಜಿನ ಬೋಧಕ - ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top