ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಚಿನ ಪದಕ

Upayuktha
0

ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ನವೆಂಬರ್ 19 ರಿಂದ 23ರವರೆಗೆ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.


100 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರಜತ್ ಆರ್ ಭಟ್ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಈತನು ವಿಟ್ಲದ ರಾಜೇಶ್ ಭಟ್ ಮತ್ತು ರಾಧಿಕಾ ಭಟ್ ದಂಪತಿ ಪುತ್ರ.


ಉದ್ದಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈತನು ಕಬಕದ ನಾಗರಾಜ್ ಹೆಗ್ಡೆ ಮತ್ತು ಭಾನುಮತಿ ದಂಪತಿ ಪುತ್ರ.


4x100 ಮೀಟರ್ ರಿಲೇ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ರಜತ್ ಆರ್ ಭಟ್, ಪವನ್ ಕುಮಾರ್, ಪ್ರಮಥ್ ರೈ ಮತ್ತು ಧನುಷ್ ರವರನ್ನು ಒಳಗೊಂಡ ತಂಡವು ಕಂಚಿನ ಪದಕವನ್ನು ಪಡೆದುಕೊಂಡಿದೆ.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top