ಮೂಡುಬಿದಿರೆ: ಹಾವೇರಿಯ ಹಂಸಬಾವಿಯಲ್ಲಿ ರಾಜ್ಯದ ಕೃಷಿ ಸಚಿವರಾದ ಬಿ.ಸಿ.ಪಾಟೀಲ್‌ರವರ ಹುಟ್ಟುಹಬ್ಬದ ಪ್ರಯುಕ್ತ ಪುರುಷರ ಮತ್ತು ಮಹಿಳೆಯರ ಹೊನಲು ಬೆಳಕಿನ ಖೋ-ಖೋ ಚಾಂಪಿಯನ್ಶಿಪ್ ಇತ್ತೀಚೆಗೆ ನಡೆಯಿತು.
ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರಿನ ಯಂಗ್ ಪಯೋನಿಯರ್ಸ್ ಸ್ಪೋರ್ಟ್ಸ್ ಕ್ಲಬ್ ತಂಡವನ್ನು ಮಣಿಸಿ ಪ್ರಥಮ ಸ್ಥಾನವನ್ನು ಪಡೆಯಿತು, ವೈಯಕ್ತಿಕ ಪ್ರಶಸ್ತಿ ವಿಭಾಗದಲ್ಲಿ ಆಳ್ವಾಸ್ ತಂಡದ ಮಹೇಶ್.ಪಿ ಸರ್ವೋತ್ತಮ ಪ್ರಶಸ್ತಿಯನ್ನು ಪಡೆದುಕೊಂಡರು.
ಅದೇ ರೀತಿ ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮೈಸೂರಿನ ತಂಡವು ಹಾಗೂ ದ್ವಿತೀಯ ಸ್ಥಾನವನ್ನು ಆಳ್ವಾಸ್ ತಂಡವು ಪಡೆಯಿತು. ಮಹಿಳೆಯರ ವಿಭಾಗದ ವೈಯಕ್ತಿಕ ಪ್ರಶಸ್ತಿಯಲ್ಲಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್‌ನ ಆಶಾ ಪಡೆದುಕೊಂಡರು. ಈ ಪಂದ್ಯಾಕೂಟದಲ್ಲಿ ಪುರುಷರ ವಿಭಾಗದಲ್ಲಿ ಒಟ್ಟು 32 ತಂಡಗಳು ಹಾಗೂ ಮಹಿಳೆಯರ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದವು.
ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಶ್ಲಾಘಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ