ರಾಜ್ಯ ಮಟ್ಟದ ಬಾಲ್‌ಬ್ಯಾಡ್ಮಿಂಟನ್: ಆಳ್ವಾಸ್‌ಗೆ ಪ್ರಶಸ್ತಿ

Upayuktha
0

ಮೂಡುಬಿದಿರೆ: ಟೌನರ್ಸ್ ಬಾಲ್‌ ಬ್ಯಾಡ್ಮಿಂಟನ್ ಕ್ಲಬ್ (ರಿ.) ಹಾಗೂ ಚಿತ್ರದುರ್ಗ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಆಶ್ರಯದಲ್ಲಿ ಚಿತ್ರದುರ್ಗದ ಚಳ್ಳೆಕೆರೆಯಲ್ಲಿ ಮುಕ್ತಾಯಗೊಂಡ ರಾಜ್ಯ ಮಟ್ಟದ ಆಹ್ವಾನಿತ ಪುರುಷರ ಬಾಲ್‌ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೂಡಬಿದಿರೆಯ ಆಳ್ವಾಸ್ ಪುರುಷರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ.


ಈ ಟೂರ್ನಿಯ ಫೈನಲ್ಸ್ ನಲ್ಲಿ ಆಳ್ವಾಸ್ ಪುರುಷರ ತಂಡ ತುಮಕೂರಿನ ಗಾಂಧಿನಗರ ತಂಡವನ್ನು 35-24, 35-20 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಸೆಮಿಫೈನಲ್ಸ್ ನಲ್ಲಿ ಆಳ್ವಾಸ್ ಪುರುಷರ ತಂಡ ಸಹ್ಯಾದ್ರಿ ಬಾಲ್‌ ಬ್ಯಾಡ್ಮಿಂಟನ್ ಕ್ಲಬ್ ತಂಡವನ್ನು 35-26, 31-35, 35-24 ಅಂಕಗಳಿಂದ ಹಾಗೂ ತುಮಕೂರಿನ ಗಾಂಧಿನಗರ ತಂಡ ಮೈಸೂರಿನ ಸ್ಕಲ್ವಿ ಅಸ್ತ್ರ ತಂಡವನ್ನು 35-26, 38-36 ಅಂಕಗಳಿಂದ ಸೋಲಿಸಿ ಫೈನಲ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿತ್ತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top