ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ಸಂಘದ ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ಸಿರಿ ವಾನಳ್ಳಿ ಅಭಿನಯದ 'ಆನಂದಭಾವಿನಿ' ಏಕವ್ಯಕ್ತಿ ನಾಟಕ ಪ್ರದರ್ಶನ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನವೆಂಬರ್ 21 ರಂದು (ಸೋಮವಾರ) ಬೆಳಗ್ಗೆ 10.30 ಕ್ಕೆ ನಡೆಯಲಿದೆ.
ಖ್ಯಾತ ವಾಗ್ಮಿ ಮತ್ತು ವಿಶ್ರಾಂತ ಪ್ರಾಧ್ಯಾಪಕ ಮುನಿರಾಜ ರೆಂಜಾಳ ಉದ್ಘಾಟಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ ಕೆ ವಹಿಸಲಿದ್ದಾರೆ.
ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಮತ್ತು ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ.ಸೋಮಣ್ಣ ಹೊಂಗಳ್ಳಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಂ ಕೆ, ಕಾರ್ಯಕ್ರಮ ಸಂಯೋಜಕ ಡಾ.ಮಧು ಬಿರಾದಾರ್ ಮೊದಲಾದವರು ಉಪಸ್ಥಿತರಿರಲಿದ್ದಾರೆ, ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ