ನ.21ರಂದು ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸ

Upayuktha
0

ಶೇಷಾದ್ರಿಪುರಂ: ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು - ಗಾಂಧಿ ಅಧ್ಯಯನ ಕೇಂದ್ರ ಹಾಗು ಸಮರ್ಪಣ - ಶೇಷಾದ್ರಿಪುರಂ ಸಂಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಈ ನಾಡು ಕಂಡ ಶ್ರೇಷ್ಠ ಮಾನವತಾವಾದಿ, ಸಾವಿರಾರು ಬಡವರಿಗೆ ನ್ಯಾಯದಾನ ಮಾಡಿದ ವಕೀಲರು, ಕನ್ನಡದ ಕೀರ್ತಿಯನ್ನು ಬೆಳಗಿದ ಸಾಹಿತ್ಯ ರತ್ನ ಶ್ರೀ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸವನ್ನು ನವೆಂಬರ್ 21 ಸೋಮವಾರ ಸಂಜೆ 6.00 ಘಂಟೆಗೆ ನಗರದ ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.


ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶರವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು, ಚಿತ್ರದುರ್ಗದ ವಿದ್ವಾಂಸ ಪ್ರೊ. ಡಿ.ಆಂಜಿನಪ್ಪರವರು ‘ಗಾಂಧೀಜಿಯವರ ಸಮನ್ವಯ ದೃಷ್ಠಿ’ ಕುರಿತು ಉಪನ್ಯಾಸ ನೀಡಲಿದ್ದಾರೆ.


ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಆಶಯ ನುಡಿಗಳನ್ನಾಡುವರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ. ಕೃಷ್ಣ ಅಧ್ಯಕ್ಷತೆ ವಹಿಸುವರು ಮತ್ತು ವಿಶ್ರಾಂತ ಪ್ರಾಂಶುಪಾಲರು ಹಾಗೂ ದತ್ತಿಯ ದಾನಿಗಳಾದ ಪ್ರೊ. ಚಂದ್ರಿಕಾ ಪುರಾಣಿಕ ಮತ್ತು ಸಮರ್ಪಣ ಅಧ್ಯಕ್ಷ ಎಚ್.ಎಸ್. ರಾಘವೇಂದ್ರ ಶೆಟ್ಟಿ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top