ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸ

Upayuktha
0

ಬೆಂಗಳೂರು: ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು- ಗಾಂಧಿ ಅಧ್ಯಯನ ಕೇಂದ್ರ ಹಾಗೂ ಸಮರ್ಪಣ- ಶೇಷಾದ್ರಿಪುರಂ ಸಂಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಈ ನಾಡು ಕಂಡ ಶ್ರೇಷ್ಠ ಮಾನವತಾವಾದಿ, ಸಾವಿರಾರು ಬಡವರಿಗೆ ನ್ಯಾಯದಾನ ಮಾಡಿದ ವಕೀಲರು, ಕನ್ನಡದ ಕೀರ್ತಿಯನ್ನು ಬೆಳಗಿದ ಸಾಹಿತ್ಯ ರತ್ನ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸವನ್ನು ನವೆಂಬರ್ 21ರಂದು ನಗರದ ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.


ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶರವರು ವಿಶೇಷ ಆಹ್ವಾನಿತರಾಗಿ ಆಗಮಿಸಿ ಮಾತನಾಡುತ್ತ ಬಹುರೂಪಿ ನಾಯಕತ್ವ ಗುಣ ಹೊಂದಿದ್ದ ಗಾಂಧಿಜಿ ಜೀವಮಾನದ ಉದ್ದಕ್ಕೂ ಸತ್ಯ ಅಹಿಂಸೆ ಮೂಲಕ ಸಾಮಾಜಿಕ ನ್ಯಾಯ ವ್ಯವಸ್ಥೆಗೆ ಶ್ರಮಿಸಿದ ಮಹಾಚೇತನದ ಸಾಂಸ್ಕೃತಿಕ ಕಥನ ಇಂದಿಗೂ ಪ್ರಸ್ತುತ ಎಂದು ಅಭಿಪ್ರಾಯಪಟ್ಟರು.


ಚಿತ್ರದುರ್ಗದ ವಿದ್ವಾಂಸ ಪ್ರೊ.ಡಿ. ಆಂಜಿನಪ್ಪ ರವರು ‘ಗಾಂಧೀಜಿಯವರ ಸಮನ್ವಯ ದೃಷ್ಠಿ’ ಕುರಿತು ಉಪನ್ಯಾಸ ನೀಡಿ ವಿದ್ಯಾರ್ಥಿಗಳ ಸಂವಾದ ನಡೆಸಿದರು. ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಆಶಯ ನುಡಿಗಳನ್ನಾಡಿದರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ. ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಮತ್ತು ವಿಶ್ರಾಂತ ಪ್ರಾಂಶುಪಾಲರು ಹಾಗೂ ದತ್ತಿಯ ದಾನಿಗಳಾದ ಪ್ರೊ. ಚಂದ್ರಿಕಾ ಪುರಾಣಿಕ ಮತ್ತು ಸಮರ್ಪಣ ಅಧ್ಯಕ್ಷ ಎಚ್.ಎಸ್. ರಾಘವೇಂದ್ರ ಶೆಟ್ಟಿ, ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಸತ್ಯಮಂಗಲ ಮಹಾದೇವ, ಕಾಲೇಜಿನ ಪ್ರಾಂಶುಪಾಲ ಪ್ರೊ. ಎನ್.ಎಸ್. ಸತೀಶ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top