ವಳಚ್ಚಿಲ್‌ ಎಕ್ಸ್‌ಪರ್ಟ್‌ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Upayuktha
0

ಕ್ರೀಡೆಯಿಂದ ಜೀವನದಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ



ಮಂಗಳೂರು: ಬಹುಮುಖ ಪ್ರತಿಭೆ ಜೀವನದಲ್ಲಿ ಹೆಚ್ಚಿನ ಯಶಸ್ಸು ತರುತ್ತದೆ. ಕ್ರೀಡೆಯಿಂದ ಜೀವನದಲ್ಲಿ ಆತ್ಮವಿಶ್ವಾಸ ಬೆಳೆಸಲು ಸಾಧ್ಯವಾಗುತ್ತದೆ ಎಂದು ಮಂಗಳೂರು ಮಹಾನಗರಪಾಲಿಕೆಯ ಕಮಿಷನರ್ ಅಕ್ಷಯ್ ಶ್ರೀಧರ್ ಹೇಳಿದರು.


ವಳಚ್ಚಿಲ್ ಎಕ್ಸ್‌ರ್ಟ್ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಸಾಧನೆ ಮಾಡಿದರೆ ಸಾಲದು; ಕ್ರೀಡಾ ಕ್ಷೇತ್ರದಲ್ಲಿಯೂ ತಮ್ಮ ಸಾಧನೆಯನ್ನು ಮೆರೆಯಬೇಕು. ಇದರಿಂದ ಬದುಕಿನಲ್ಲಿ ಸೋಲು-ಗೆಲುವಿನ ಪಾಠ ಕಲಿಯಲು ಸಾಧ್ಯ. ಆಟೋಟ ಸ್ಪರ್ಧೆಗಳಿಂದ ಮಾನಸಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯವಿದೆ ಎಂದವರು ವಿವರಿಸಿದರು.


ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಎಕ್ಸ್‍ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್.ನಾಯಕ್, ಮಾಹಿತಿ ತಂತ್ರಜ್ಞಾನ ನಿರ್ದೇಶಕ ಅಂಕುಶ್ ಎನ್.ನಾಯಕ್, ವಾಸ್ತು ತಜ್ಞೆ ದೀಪಿಕಾ ಎ. ನಾಯಕ್, ಉಪಪ್ರಾಂಶುಪಾಲರಾದ ರಾಘವೇಂದ್ರ ಶೆಣೈ, ಸುಬ್ರಹ್ಮಣ್ಯ ಉಡುಪ ಉಪಸ್ಥಿತರಿದ್ದರು.


ಪ್ರಾಂಶುಪಾಲ ಡಾ.ಎನ್.ಕೆ.ವಿಜಯನ್ ಕ್ರೀಡಾಳುಗಳಿಗೆ ಪ್ರತಿಜ್ಞೆ ಬೋಧಿಸಿದರು. ಕಾರ್ಯಕ್ರಮ ನಿರ್ದೇಶಕ ಹರಿಪ್ರಸಾದ್ ಬಿ. ಸಾಗತಿಸಿ, ಕಾರ್ಯಕ್ರಮ ಸಹಾಯಕ ನಿರ್ದೇಶಕ ಬಾಲಕೃಷ್ಣ ಶೆಟ್ಟಿ ವಂದಿಸಿದರು. ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ನಿಶತ್ ಫಾತಿಮಾ ನಿರೂಪಿಸಿದರು. 

ಪ್ರಜ್ವಲ್ ರೂಡಿಗಿ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top