ನಿಟ್ಟೆ ತಾಂತ್ರಿಕ ಕಾಲೇಜಿಗೆ ಇಪಿಎಫ್ ಸಂಸ್ಥೆಯಿಂದ ಪ್ರಶಂಸನಾ ಪ್ರಮಾಣಪತ್ರ

Upayuktha
0

ನಿಟ್ಟೆ: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯಡಿಯಲ್ಲಿ ಬರುವ ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಸಂಸ್ಥೆಯ ಉಡುಪಿ ಘಟಕವು ತಮ್ಮ ವಿಭಾಗದಡಿಯಲ್ಲಿ ದೊಡ್ಡ ಸಂಸ್ಥೆಗಳ ಪೈಕಿ ಇಪಿಎಫ್ ನ ನಿಬಂಧನೆಗಳು ಹಾಗೂ ಯೋಜನೆಗಳನ್ನು ಯಶಸ್ವಿಯಾಗಿಸುವಲ್ಲಿ ಉತ್ತಮಕಾರ್ಯ ನಿರ್ವಹಿಸಿದ ಹಿನ್ನಲೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವನ್ನು ಗುರುತಿಸಿ ಪ್ರಶಂಸನಾ ಪ್ರಮಾಣಪತ್ರ ನೀಡಿದೆ.


ಇತ್ತೀಚೆಗೆ ಉಡುಪಿಯಲ್ಲಿ ನಡೆದ ಉಡುಪಿ ಇಪಿಎಫ್ ಪ್ರಾದೇಶಿಕ ಕಛೇರಿಯ 70ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಮಾಣಪತ್ರವನ್ನು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲ ಡಾ.ಶ್ರೀನಿವಾಸ ರಾವ್ ಬಿ.ಆರ್ ಅವರಿಗೆ ಉಡುಪಿ ಜಿಲ್ಲಾ ಪೋಲೀಸ್ ವರಿ‍ಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರು ನೀಡಿದರು ಎಂದು ನಿಟ್ಟೆ ಕಾಲೇಜಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top