ಪುತ್ತೂರು: ಬಿ. ಸಿ.ರೋಡಿನ ಯಾಮೋಟೋ ಶೊಟೋಕಾನ್ ಕರಾಟೆ ಎಸೋಸಿಯೇಶನ್ ನವರು ಆಯೋಜಿಸಿದ ಓಪನ್ ಟೂರ್ನಮೆಂಟ್ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾವಿಭಾಗದ ಅರುಣ್ ಕುಮಾರ್ ಎಂ.ಆರ್ ಕಟಾ ವಿಭಾಗದಲ್ಲಿ ಪ್ರಥಮ ಮತ್ತು ಕುಮಿಟೆ ವಿಭಾಗದಲ್ಲಿ ದ್ವಿತೀಯ ಬಹುಮಾನ ಗಳಿಸಿದ್ದಾರೆ.
ಈತನು ಪುತ್ತೂರಿನ ಅಮ್ಚಿನಡ್ಕದ ಮಡ್ನೂರು ಗ್ರಾಮದ ರಮೇಶ್ ಎ ಎಂ ಮತ್ತು ಲಲಿತಾ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ