ಬೆಂಗಳೂರು: ರಾಜ್ಯದ ನೂತನ ಖಾಸಗಿ ವಿಶ್ವವಿದ್ಯಾಲಯ- ಚಾಣಕ್ಯ ಯುನಿವರ್ಸಿಟಿಯ ಅಧಿಕೃತ ಉದ್ಘಾಟನೆ ಕಾರ್ಯಕ್ರಮ ನ.19ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಅಮೆರಿಕದ ಪ್ರಿನ್ಸ್‌ಟನ್ ಯುನಿವರ್ಸಿಟಿಯ ಪ್ರೊಫೆಸರ್ ಮಂಜುಲ್ ಭಾರ್ಗವ ಅವರು ಭಾಗವಹಿಸಲಿದ್ದು, ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಸಿ.ಎನ್, ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ ಪದ್ಮಶ್ರೀ ಡಾ. ಸುಧಾ ಮೂರ್ತಿ, ಜಿಂದಾಲ್ ಅಲ್ಯುಮಿನಿಯಂ ಆಡಳಿತ ನಿರ್ದೇಶಕ ಹಾಗೂ ಸಂಸ್ಥಾಪಕ ಅಧ್ಯಕ್ಷರಾದ ಡಾ. ಸೀತಾರಾಮ್ ಜಿಂದಾಲ್ ಪಾಲ್ಗೊಳ್ಳಲಿದ್ದಾರೆ.
ಇಸ್ರೋದ ನಿವೃತ್ತ ಮುಖ್ಯಸ್ಥರು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ 2022 ಕರಡು ಸಮಿತಿಯ ಅಧ್ಯಕ್ಷರಾದ ಪದ್ಮವಿಭೂಷಣ ಡಾ. ಕೆ. ಕಸ್ತೂರಿರಂಗನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕುಲಪತಿ ಪ್ರೊ. ಯಶವಂತ ಡೋಂಗ್ರೆ, ಉಪ ಕುಲಾಧಿಪತಿ ಎಂ.ಪಿ ಕುಮಾರ್ ಮತ್ತು ಕುಲಾಧಿಪತಿ ಪ್ರೊ. ಎಂ.ಕೆ ಶ್ರೀಧರ್ ಅವರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
'ರೂಟೆಡ್ ಇನ್ ಐಡಿಯಲ್ಸ್ ಅಸೆಂಡಿಂಗ್ ವಿತ್ ಐಡಿಯಾಸ್'- ಎಂಬ ಘೋಷವಾಕ್ಯದೊಂದಿಗೆ ನೂತನ ವಿಶ್ವವಿದ್ಯಾಲಯ ಉದ್ಘಾಟನೆಗೆ ಸಜ್ಜಾಗಿದೆ.
ನೂತನ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಸಲಹಾ ಮಂಡಳಿ ಹಾಗೂ ಆಡಳಿತ ಮಂಡಳಿಯ ವಿವರ ಇಂತಿದೆ:
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ