ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನ. 10ರಂದು ವಾರ್ಷಿಕೋತ್ಸವ

Upayuktha
0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನವೆಂಬರ್ 10ರಂದು ವಾರ್ಷಿಕೋತ್ಸವವು ಜರುಗಲಿದೆ. ಪೂರ್ವಾಹ್ನ 9.00 ನಡೆಯುವ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ವಹಿಸಲಿದ್ದು, ಅತಿಥಿಗಳಾಗಿ ಸಕಲೇಶಪುರದ ರೋಟರಿ ಶಾಲೆಯ ಮುಖ್ಯೋಪಾಧ್ಯಾಯ ಸುಮಂತ್ ಮತ್ತು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹರಿಕಿರಣ್ ಕೆ ಭಾಗವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಎಂ. ಗೋಪಾಲಕೃಷ್ಣ ಭಟ್ ಉಪಸ್ಥಿತರಿರುತ್ತಾರೆ. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top