ಮಂಗಳೂರು: ತಂತ್ರಜ್ಞಾನ ಎನ್ನುವುದು ಕತ್ತಿ ಇದ್ದಂತೆ ಅದು ಎಷ್ಟು ಉಪಯುಕ್ತವೋ ಅಷ್ಟೇ ಅಪಾಯಕಾರಿಯೂ ಹೌದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಹೆಚ್ ಎಲ್ ಶಶಿರೇಖಾ ಅಭಿಪ್ರಾಯಪಟ್ಟರು.
ನಗರದ ವಿಶ್ವವಿದ್ಯಾಲಯ ಕಾಲೇಜಿನ ಡಾ ಶಿವರಾಮ ಕಾರಂತ ಸಭಾಭವನದಲ್ಲಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ಐಕ್ಯೂಎಸಿ ಜಂಟಿಯಾಗಿ ಮಂಗಳವಾರ ಆಯೋಜಿಸಿದ್ದ ಕೇಂದ್ರ ಗೃಹ ಸಚಿವಾಲಯ ಆರಂಭಿಸಿರುವ 'ಸೈಬರ್ ಜಾಗೃತಿ ದಿವಸ' ಆಚರಣೆ ಮತ್ತು “ಸೈಬರ್ ಅಪರಾಧ ಮತ್ತು ಸೈಬರ್ ಸುರಕ್ಷತೆ ಜಾಗೃತಿ” ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಅವರು, ಯುವ ಸಮುದಾಯದ ಮೇಲೆ ಸೈಬರ್ ಅಪರಾಧದಿಂದ ಆಗುತ್ತಿರುವ ಅಪಾಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ ವಹಿಸಿ ಸೈಬರ್ ಕ್ರೈಂ ಎಂಬುದು ಮಾನವ ನಿರ್ಮಿತ ಕೂಪ. ಅದರಿಂದ ಯುವ ಜನಾಂಗ ಎಚ್ಚರಿಕೆಯಿಂದ ಇರಬೇಕು, ಎಂದರು.
ಸಾರ್ವಜನಿಕರಲ್ಲಿ ಸೈಬರ್ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು, ಸೈಬರ್ ಅಪರಾಧವನ್ನು ತಡೆಗಟ್ಟುವುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಕಾನೂನು ಜಾರಿ ಸಂಸ್ಥೆಗಳ ಜೊತೆ ಸಮನ್ವಯವನ್ನು ಸುಧಾರಿಸುವ ಉದ್ದೇಶದಿಂದ ಗೃಹ ಸಚಿವಾಲಯ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರವನ್ನು ಪ್ರಾರಂಭಿಸಿದೆ. ಸೈಬರ್ ಕ್ರೈಮ್ ಘಟನೆಗಳ ಆನ್‌ಲೈನ್ ವರದಿ ಮಾಡಲು ಇದು ರಾಷ್ಟ್ರೀಯ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ (ಎನ್‌ಸಿಆರ್‌ಪಿ) ಅನ್ನು ಸಹ ಪ್ರಾರಂಭಿಸಿದೆ.
ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ವೀರಭದ್ರಪ್ಪ ಅತಿಥಿಗಳನ್ನು ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕ ಡಾ. ಸಿದ್ದರಾಜು ಎಂ ಎನ್ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಿಕೆ ಡಾ. ಭಾರತಿ ಪಿಲಾರ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ