''ಕನ್ನಡ ನಾಡಿನ ಸಾಕಾರದುತ್ಸವ - ರಾಜ್ಯೋತ್ಸವ ಅದು ನಿತ್ಯೋತ್ಸವವಾಗಬೇಕು'': ಡಾ. ಗುರುರಾಜ ಪೋಶೆಟ್ಟಿಹಳ್ಳಿ

Upayuktha
0

ಬೆಂಗಳೂರು: ಜೆಪಿ ನಗರ ಆರನೇ ಹಂತದ ಇಮೇಜ್ ಆಂಗ್ಲ ಶಾಲೆಯಲ್ಲಿ ನಡೆದ 67ನೇ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಕನ್ನಡ ಧ್ವಜಾರೋಹಣ ನೆರವೇರಿಸಿ, ತಾಯಿ ಭುವನೇಶ್ವರಿಯ ಚಿತ್ರಪಟಕ್ಕೆ ಪುಷ್ಪಾರ್ಚನೆ ಸಲ್ಲಿಸಿ ,ಜ್ಯೋತಿ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ವಿದ್ಯಾರ್ಥಿಗಳಿಂದ  ಪಥಸಂಚಲನ ಗೌರವ ವಂದನೆಯನ್ನು ಸ್ವೀಕರಿಸಿದರು. ನಾಡಗೀತೆಯೊಂದಿಗೆ ರೈತ ಗೀತೆಯನ್ನು ಪ್ರಸ್ತುತಪಡಿಸಿದ್ದು ವಿಶೇಷವಾಗಿತ್ತು.


ನಂತರ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಮಾತನಾಡುತ್ತಾ ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಅಮೃತ ಭಾರತಿಗೆ ಕನ್ನಡದಆರತಿ ಬೆಳಗಿದ ವಿದ್ಯಾರ್ಥಿಗಳ ಪ್ರತಿಭಾ ಕೌಶಲ್ಯವನ್ನು ಮೆಚ್ಚಿ ಸಾಂಸ್ಕೃತಿಕ ಸೊಬಗಿನೊಂದಿಗೆ ಶೈಕ್ಷಣಿಕ ಸಾಧನೆಯನ್ನು ಮಾಡುತ್ತಿರುವ ಶಾಲೆಯ ಕಾರ್ಯ ಚಟುವಟಿಕೆಗಳು ಮಾದರಿ ಎನಿಸಿದೆ. ಕೇವಲ ನವೆಂಬರ್ ಒಂದರಂದು ಮಾತ್ರ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸದೆ ಅದು ನಿತ್ಯೋತ್ಸವವಾಗಬೇಕು ಎಂದು ಅಭಿಪ್ರಾಯಪಟ್ಟರು.


ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ,ಶಾಲಾ ಗ್ರಂಥಾಲಯಕ್ಕೆ ಅಕ್ಷರ ದಾಸೋಹವಾಗಿ ಕೆಲವು ಕನ್ನಡದ ಪುಸ್ತಕಗಳನ್ನು ನೀಡಲಾಯಿತು. ಹಿರಿಯ ಶಿಕ್ಷಣ ತಜ್ಞ ಎಲ್. ಸತ್ಯನಾರಾಯಣ, ಶಾಲೆಯ ಸಂಸ್ಥಾಪಕ ಪ್ರಾಚಾರ್ಯ ಪಿ.ವಿ.ರವೀಂದ್ರನಾಥ್ ಮೊದಲಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top