ಕಾಸರಗೋಡು: ಕೊಟ್ರೇಶ್ ಎಸ್ ಉಪ್ಪಾರ್ ಸಾರಥ್ಯದಲ್ಲಿ ಮಾಣಿಕ್ಯ ಪ್ರಕಾಶನ (ರಿ.) ಹಾಸನ ಸಂಸ್ಥೆಯ ವತಿಯಿಂದ ನ. 20 ರಂದು ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ 6 ನೇ ವರ್ಷದ ಕವಿ ಕಾವ್ಯ ಸಂಭ್ರಮ 2022 ಈ ಸಮಾರಂಭದಲ್ಲಿ ನಾಡು ನುಡಿ ಸಂಘಟನೆಗೆ ಕೊಡಮಾಡುವ "ಮಾಣಿಕ್ಯ ರಾಜ್ಯೋತ್ಸವ ಪ್ರಶಸ್ತಿ"ಗೆ ಗಡಿನಾಡದ ಕಾಸರಗೋಡಿನಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಹಾಗೂ ತೆರೆ ಮರೆಯ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆ ಒದಗಿಸಿ ಕೊಟ್ಟು ಕಲೆಯನ್ನು ಬೆಳೆಸುವ ಸಲುವಾಗಿ ಸಂಘಟನೆ ಕಟ್ಟಿಕೊಂಡು ಕನ್ನಡ ನಾಡು ನುಡಿಯ ರಕ್ಷಣೆಗಾಗಿ ಪ್ರಯತ್ನಿಸುತ್ತಿರುವ ಡಾ. ವಾಣಿಶ್ರೀ ಕಾಸರಗೋಡು ಇವರು ಆಯ್ಕೆ ಆಗಿರುತ್ತಾರೆ ಎಂದು ಮಾಣಿಕ್ಯ ಪ್ರಕಾಶನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ