ಬದಿಯಡ್ಕ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಗೋಪೂಜೆ ನೆರವೇರಿಸಲಾಯಿತು. ಶಾಲಾ ಪರಿಸರದ ಉಷಾ ಚಂದ್ರಹಾಸ ಶೆಟ್ಟಿಯವರ ಮನೆಯ ಗೋವನ್ನು ಶಾಲೆಯ ಪರಿಸರದಲ್ಲಿ ಪೂಜಿಸಲಾಯಿತು. ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಗೋವಿಗೆ ಆರತಿಯನ್ನು ಬೆಳಗಿ, ತಿಲಕವನ್ನಿಟ್ಟು ಭಕ್ತಿಯಿಂದ ನಮಸ್ಕರಿಸಿದರು.
ಮುಖ್ಯೋಪಾಧ್ಯಾಯ ಶ್ರೀಯುತ ಶ್ಯಾಂಭಟ್ ದರ್ಭೆಮಾರ್ಗ, ಸಹಮುಖ್ಯ ಶಿಕ್ಷಕಿ ಚಿತ್ರಾಸರಸ್ವತಿ ಪೆರಡಾನ, ಗ್ರಂಥಪಾಲಿಕೆ ವಿಜಯಾಸುಬ್ರಹ್ಮಣ್ಯ, ಅಧ್ಯಾಪಕ ವೃಂದದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


