
ಮಂಗಳೂರು: ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ವತಿಯಿಂದ 2022-23ನೇ ಸಾಲಿನ ಗೃಹರಕ್ಷಕರ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟವು ಎಮ್ಮೆಕೆರೆ ಮೈದಾನದಲ್ಲಿ ದಿನಾಂಕ 13-11-2022 ಮತ್ತು 15-11-2022 ರಂದು ನಡೆಯಲಿದ್ದು, ಈ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕಾರವಾರ ಜಿಲ್ಲೆಗಳ ಗೃಹರಕ್ಷಕರು ಭಾಗವಹಿಸಲಿದ್ದಾರೆ.
ಉದ್ಘಾಟನ ಸಮಾರಂಭವು ದಿನಾಂಕ 13-11-2022 ರಂದು ಸಂಜೆ 4:30 ಕ್ಕೆ ರಾಮ ಲಕ್ಷ್ಮಿನಾರಾಯಣ ಕನ್ವೆನ್‌ಷನ್ ಹಾಲ್ ನಲ್ಲಿ ನಡೆಯಲಿದ್ದು, ಹೆಚ್. ಕೆ ಕೃಷ್ಣಮೂರ್ತಿ, KAS ಅಪರ ಜಿಲ್ಲಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ, ಇವರು ಉದ್ಘಾಟಿಸಲಿದ್ದಾರೆ.
ಸಮಾರೋಪ ಸಮಾರಂಭವು ದಿನಾಂಕ 15-11-2022ನೇ ಮಂಗಳವಾರದಂದು ಬೆಳಿಗ್ಗೆ 11:00 ಗಂಟೆಗೆ ರಾಮ ಲಕ್ಷ್ಮಿನಾರಾಯಣ ಕನ್ವೆನ್‌ಷನ್ ಹಾಲ್ ನಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಶ್ರೀ ಬಿ.ಪಿ.ದಿನೇಶ್ ಕುಮಾರ್, ಪೊಲೀಸ್ ಉಪ ಆಯುಕ್ತರು ಅಪರಾಧ ಮತ್ತು ಸಂಚಾರ, ಮಂಗಳೂರು ನಗರ ಇವರು ಆಗಮಿಸಲಿದ್ದಾರೆ ಹಾಗೂ ವಿಜೇತರಿಗೆ ಬಹುಮಾನವನ್ನು ವಿತರಿಸಲಿದ್ದಾರೆ.
ಈ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಕೆ. ಪ್ರಶಾಂತ್ ಶೆಟ್ಟಿ ಒ.S, ಚಿಕ್ಕಮಗಳೂರು ಜಿಲ್ಲಾ ಸಮಾದೇಷ್ಟರು ಹಾಗೂ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಕೃಷ್ಣಮೂರ್ತಿ ಜಿ, ಉತ್ತರಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಶ್ರೀ ದೀಪಕ ಜಿ. ಗೋಕರ್ಣ ಇವರುಗಳು ಉಪಸ್ಥಿತರಿರುತ್ತಾರೆ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ವಹಿಸಲಿದ್ದಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಪ್ರಕಟಣೆಯಲ್ಲಿ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ