ತೆಂಕನಿಡಿಯೂರು ಕಾಲೇಜು: ರೋವರ್ ರೇಂಜರ್ ಘಟಕದ ಚಟುವಟಿಕೆ ಉದ್ಘಾಟನೆ ಹಾಗೂ ಸ್ಕೌಟ್ ಕೌಶಲಗಳ ಕಾರ್ಯಾಗಾರ

Upayuktha
0

ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ರೋವರ್ - ರೇಂಜರ್ ಘಟಕದ ಚಟುವಟಿಕೆಗಳ ಉದ್ಘಾಟನೆ ಹಾಗೂ ಸ್ಕೌಟ್ ಕೌಶಲಗಳ ಬಗ್ಗೆ ಒಂದು ದಿನದ ಕಾರ್ಯಾಗಾರವು ದಿನಾಂಕ 08/11/2022 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ. 2022-23ನೇ ಸಾಲಿನ ರೋವರ್-ರೇಂಜರ್ ಚಟುವಟಿಕೆಗಳನ್ನು ಉದ್ಘಾಟಿಸಿದರು. ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಇದರ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಶ್ರೀಮತಿ ಸುಮನ್ ಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ತರಬೇತಿ ಆಯುಕ್ತರಾದ ಶ್ರೀ ಆನಂದ ಅಡಿಗ ಅವರು ಮಾತನಾಡುತ್ತಾ ಉತ್ತಮ ಸಮಾಜದ ನಿರ್ಮಾಣದಲ್ಲಿ ಸ್ಕೌಟ್ ತರಬೇತಿಯ ಪಾತ್ರ ಮಹತ್ವದ್ದಾಗಿದೆ. ಪ್ರಪಂಚದ ಅತೀ ದೊಡ್ಡ ಸಮವಸ್ತ್ರ ಹೊಂದಿರುವ ಸಂಘಟನೆಯಾಗಿರುವ ಸ್ಕೌಟ್ ಮತ್ತು ಗೈಡ್ಸ್ ಶತಮಾನದಿಂದ ಯುವ ಜನರನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುವಲ್ಲಿ ಯಶಸ್ವಿಯಾಗಿ ತೊಡಗಿಸಿಕೊಂಡಿದೆ. ಸ್ಕೌಟ್ ಕೌಶಲಗಳು ಹಾಗೂ ಶಿಸ್ತುಬದ್ಧ ನಡವಳಿಕೆಗಳ ಮೂಲಕ ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯ ಎಂದರು.


ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ರೋವರ್ಸ್ ಸ್ಕೌಟ್ ಲೀಡರ್ ಡಾ. ಉದಯ ಶೆಟ್ಟಿ ಕೆ. ಪ್ರಾಸ್ತಾವಿಸಿದರು. ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ಮೇವಿ ಮಿರಾಂದ ಹಾಗೂ ರೇಂಜರ್ ಲೀಡರ್ ಡಾ. ಆಶಾ ಸಿ. ಇಂಗಳಗಿ ಉಪಸ್ಥಿತರಿದ್ದರು. ಬಿ.ಬಿ.ಎ. ವಿದ್ಯಾರ್ಥಿ ನಿತೀಶ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಕರ ಸ್ವಾಗತಿಸಿದರು. ಸಚ್ಚೀ ಎಸ್. ಸುವರ್ಣ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top