ಮಲವಂತಿಗೆ: ಶ್ರದ್ಧೆ ಮತ್ತು ಜವಾಬ್ದಾರಿಯಿಂದ ಗುರಿಯೆಡೆಗೆ ತಲುಪಲು ಶ್ರಮ ವಹಿಸಿದರೆ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹೇಳಿದರು.
ಇವರು ಮಲವಂತಿಗೆಯ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಲವಂತಿಗೆಯ ಮಲೆನಾಡು ಎಜ್ಯುಕೇಶನ್ ಸೊಸೈಟಿ ಇದರ ಅಧ್ಯಕ್ಷರಾದ ಶ್ರೀಧರ ಜಿ ಭಿಡೆಯವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಶ್ಲಾಘನೀಯ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಸೋಮಶೇಖರ ಶೆಟ್ಟಿ ಮಾತನಾಡಿದರು. ಮಲವಂತಿಗೆ ಗ್ರಾಮಕರಣಿಕರಾದ ಸಂತೋಷ ಕುಮಾರ್ ಇವರು ವಿಶೇಷ ಕರಪತ್ರವನ್ನು ಅನಾವರಣಗೊಳಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಎನ್.ದಿನೇಶ ಚೌಟ, ಮಲವಂತಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಡಿ. ದಿನೇಶ ಗೌಡ, ಸದಸ್ಯರಾದ ಪ್ರಕಾಶ ಜೈನ್, ರೋಹಿಣಿ ಜಯವರ್ಮ ಗೌಡ, ಗ್ರಾಮದ ಪ್ರಮುಖರಾದ ಮಹಮ್ಮದ್ ದಿಡುಪೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಎನ್. ಟಿ. ನಾರಾಯಣ ಗೌಡ, ಗೌಡರ ಯಾನೆ ವಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾದ ಆನಂದ ಗೌಡ , ಶಿಬಿರ ಸಮಿತಿ ಅಧ್ಯಕ್ಷರಾದ ತೀಕ್ಷಿತ್ ಕೆ. ಕಲ್ಬೆಟ್ಟು, ಉಪಾಧ್ಯಕ್ಷರಾದ ಕೇಶವ ವಿ ಫಡಕೆ, ಕಾರ್ಯದರ್ಶಿ ಜಯಂತ ಹೆಗ್ಡೆ , ಸದಸ್ಯರಾದ ಡೀಕಯ್ಯ ಎಂ.ಕೆ, ರಾ. ಸೇ. ಯೋಜನೆಯ ನಾಯಕರಾದ ವಂಶಿ ಭಟ್, ವರ್ಧಿನಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಧನ್ಯವಾದ ಅರ್ಪಿಸಿದರು. ಉಪ ನಾಯಕಿ ಪ್ರಣಮ್ಯಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ