ವಿದ್ಯಾರ್ಥಿಗಳಿಗೆ ಸಂಶೋಧನಾತ್ಮಕ ಚಟುವಟಿಕೆಗಳಿಗೆ ಆದ್ಯತೆ ಕೊಡಿ: ವಸಂತಿ ಕೆ

Upayuktha
0

ಪುತ್ತೂರು: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಯಾವುದೇ ಒಂದು ವಿಷಯದಲ್ಲಿ ತೊಡಗಿದಾಗ ಅದನ್ನು ಪ್ರಶ್ನಿಸುವಂತಹ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು .ಆಗ ಮಾತ್ರ ಹೊಸದಾದಂತಹ ಆವಿಷ್ಕಾರಗಳನ್ನು ಕಂಡುಹಿಡಿಯಲು ಸಾಧ್ಯ .ಹಾಗೆ ನಾವು ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ಒಲವು ,ಆಸಕ್ತಿಯನ್ನು ಬೆಳೆಸಿಕೊಂಡು ನಿಷ್ಠೆಗೆ ಬದ್ಧವಾಗಿ ಕೆಲಸ ಮಾಡಿದರೆ ಆ ಕೆಲಸ ಸಂಪೂರ್ಣವಾಗುತ್ತದೆ. ಸರಿಯಾದ ಸ್ಪಷ್ಟ ಗುರಿಯನ್ನು ಇಟ್ಟುಕೊಂಡು ಸಾಗುವುದಕ್ಕೆ ವಿದ್ಯಾರ್ಥಿಗಳು ಛಲ, ಧೈರ್ಯವನ್ನು ಬೆಳೆಸಿಕೊಂಡು ಹೊಸದಾದ ಸಂಶೋಧನೆಯನ್ನು ಮಾಡುವಲ್ಲಿ ಯಶಸ್ವಿ ಆಗಬೇಕು, ಎಂದು ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ ವಿಜ್ಞಾನ ವಿಭಾಗದ ನಿವೃತ್ತ ಉಪನ್ಯಾಸಕಿ ವಸಂತಿ.ಕೆ.ಹೇಳಿದರು.


ಇವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ ( ಸ್ವಾಯತ್ತ), ವಿಜ್ಞಾನ ವಿಭಾಗ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ವಿಜ್ಞಾನ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.


ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಆಗಮಿಸಿದ ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ. ಶಿವಪ್ರಸಾದ್ ಕೆ .ಎಸ್ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿ ವಿದ್ಯಾರ್ಥಿಗಳು ತಮ್ಮ ಅಧ್ಯಯನ ಸಂದರ್ಭದಲ್ಲಿಯೇ ಸಂಶೋಧನಾತ್ಮಕವಾದ ಅಲೋಚನೆಗಳನ್ನು ಬೆಳೆಸಿಕೊಂಡು ಅದರಲ್ಲಿ ಸಂಪೂರ್ಣವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ವಿಜ್ಞಾನ ಸಂಘದ ಸಂಯೋಜಕಿ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ನಿಶಾ ಹಾಗೂ ವಿಜ್ಞಾನ ಸಂಘದ ಪದಾಧಿಕಾರಿಗಳಾದಂತಹ ಶ್ರೇಯ, ಶ್ರದ್ಧಾ, ಅಂಕಿತ ಉಪಸ್ಥಿತರಿದ್ದರು.


ಶ್ರೇಯ ಇವರು ಸ್ವಾಗತಿಸಿ, ಅನುಷಾ ಮತ್ತು ಶಿಲ್ಪ ಪ್ರಾರ್ಥಿಸಿ, ಶರಧಿ ಕಾರ್ಯಕ್ರಮವನ್ನು ನಿರೂಪಿಸಿ, ಶ್ರದ್ಧಾ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top