
ನಂಜನಗೂಡು: ನಂಜನಗೂಡು ತಾಲೂಕಿಗೆ ಅಭಿವೃದ್ಧಿಯ ಮಹಾಪೂರವೇ ಹರಿದುಬರುತ್ತಿದ್ದು, ನ.28ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಅಂದು ಬೆಳಗ್ಗೆ 10.30ಕ್ಕೆ ನಂಜನಗೂಡಿನ ಶ್ರೀ ಶ್ರೀಕಂಠ ದೇವಸ್ಥಾನಕ್ಕೆ ಸರ್ಕಾರದಿಂದ ಮಂಜೂರಾಗಿರುವ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ, ನುಗು ಏತ ನೀರಾವರಿ ಯೋಜನೆಗೆ ಚಾಲನೆ ಹಾಗೂ ಯಡಿಯಾಲ ಭಾಗದ 13 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಗೋಳೂರು (ಗೀಕಹಳ್ಳಿ) ಗ್ರಾಮದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ವಿದ್ಯುತ್ ಉಪ ಕೇಂದ್ರಗಳ ಶಂಕುಸ್ಥಾಪನೆ, ನಗರೋತ್ಥಾನ ಹಂತ -4 ರಲ್ಲಿ ನಂಜನಗೂಡು ನಗರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ನಗರೋತ್ಥಾನ ಹಂತ-3ರಲ್ಲಿ ಗೌರಿಘಟ್ಟದ ಬೀದಿಯಲ್ಲಿರುವ ನಾಯಕ ಸಮುದಾಯ ಭವನ ಹಾಗೂ ತಾಲ್ಲೂಕು ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಉದ್ಘಾಟನಾ ಸಮಾರಂಭ ನೆರವೇರಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಎಲ್ಲಾ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ನಂಜನಗೂಡು ಕ್ಷೇತ್ರದ ಶಾಸಕ ಬಿ. ಹರ್ಷವರ್ಧನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಮುಜರಾಯಿ ಹಜ್ ಹಾಗೂ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ (ಭೈರತಿ), ಪೌರಾಡಳಿತ ಸಚಿವ ಎನ್. ನಾಗರಾಜ್ (ಎಂಟಿಬಿ), ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಉಪಸ್ಥಿತರಿರುವರು.
ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್, ಮೈಸೂರು-ಕೊಡಗು ಸಂಸದ ಪ್ರತಾಪ್‌ಸಿಂಹ, ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಷ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕರದ ತನ್ವೀರ್ ಸೇಠ್, ಸಾ.ರಾ. ಮಹೇಶ್, ಜಿ.ಟಿ. ದೇವೇಗೌಡ, ಕೆ. ಮಹಾದೇವ್, ಮರಿತಿಬ್ಬೇಗೌಡ, ಎಲ್. ನಾಗೇಂದ್ರ, ಎಸ್.ಎ. ರಾಮದಾಸ್, ಡಾ. ಯತೀಂದ್ರ ಎಸ್., ಅನಿಲ್ ಕುಮಾರ್ ಸಿ., ಹೆಚ್.ಪಿ. ಮಂಜುನಾಥ್, ಅಶ್ವಿನ್ ಕುಮಾರ್, ಎಚ್. ವಿಶ್ವನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ ಅತಿಥಿಗಳಾಗಿ ಪಾಲ್ಗೊಳ್ಳುವರು.
ನಿಗಮ ಮಂಡಳಿಗಳ ಅಧ್ಯಕ್ಷರು, ನಂಜನಗೂಡು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಜಲಸಂಪನ್ಮೂಲ, ಧಾರ್ಮಿಕ ದತ್ತಿ ಇಲಾಖೆ, ನಗರಾಭಿವೃದ್ಧಿ, ಕವಿಪ್ರನಿ, ಕಾವೇರಿ ನೀರಾವರಿ ನಿಗಮ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಮೈಸೂರು ಜಿಲ್ಲಾ ಪಂಚಾಯ್ತಿ ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುವರು.
ಹೆಚ್ಚಿನ ಮಾಹಿತಿಗಾಗಿ
ಶ್ರೀ ಬಿ.ಹರ್ಷವರ್ಧನ್
ಶಾಸಕ ನಂಜನಗೂಡು
M: 9980099955
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ