ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ "ಕನಸುಗಳು" ಕಾರ್ಯಕ್ರಮ

Upayuktha
0

ಡಾ. ನಾ. ಸೋಮೇಶ್ವರ ಜೊತೆ ವಿಶೇಷ ಸಂವಾದ


ಪುತ್ತೂರು: ಮಗು ಹುಟ್ಟಿದ ಕ್ಷಣದಿಂದ ಹೊಸ ಹೊಸ ವಿಚಾರಗಳನ್ನು ಕಲಿತುಕೊಂಡು ಹೋಗುತ್ತದೆ. ಬಾಲ್ಯದಿಂದಲೇ ಒಳ್ಳೆಯದು ಹಾಗೂ ಕೆಟ್ಟದನ್ನು, ಹಿತಕರ ಮತ್ತು ಅಹಿತಕರವಾದ ಸೂಕ್ಷ್ಮ ವಿಚಾರಗಳನ್ನು ಗ್ರಹಿಸುವ ಸಾಮರ್ಥ್ಯ ಮಗುವಿಗೆ ಇರುತ್ತದೆ. ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗಾಗಿ ಸದಾ ಜಾಗೃತರಾಗಬೇಕು ಎಂದು ದೂರದರ್ಶನದ ಚಂದನ ವಾಹಿನಿಯ ಖ್ಯಾತ ರಸಪ್ರಶ್ನೆ ‘ಥಟ್‌ ಅಂತ ಹೇಳಿ’ ಕಾರ್ಯಕ್ರಮ ನಿರೂಪಕ ಡಾ. ನಾ. ಸೋಮೇಶ್ವರ ಹೇಳಿದರು.


ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆ ನೀಡುವ ಕನಸುಗಳು - 2022 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.


ಹುಟ್ಟಿನಿಂದಲೇ ನಾವು ಬುದ್ದಿವಂತರು. ಆದರೆ ನಾವು ಬೆಳೆಯುವ ಪರಿಸರದ ಆಧಾರದ ಮೇಲೆ ನಮ್ಮ ಗುಣ, ನಡತೆ ಮತ್ತು ವರ್ತನೆ ಬದಲಾವಣೆಯಾಗುತ್ತದೆ. ಜಂಕ್ ಫುಡ್ ಗಳನ್ನು ತ್ಯಜಿಸಿ, ಆರೋಗ್ಯಕ್ಕೆ ಹಿತಕರವಾದ ಆಹಾರವನ್ನು ಸೇವಿಸಬೇಕು. ವಿದ್ಯಾರ್ಥಿಗಳು ಓದುವುದರ ಜೊತೆಗೆ ಇನ್ನಿತರ ಚಟುವಟಿಕೆಯನ್ನು ರೂಢಿಸಿಕೊಳ್ಳಬೇಕು. ನಿರಂತರವಾಗಿ ಅಧ್ಯಯನ ಮಾಡುವುದರ ಮೂಲಕ ಜ್ಞಾನ ವೃದ್ಧಿ ಮಾಡಿಕೊಳ್ಳಬೇಕು. ವಿದ್ಯಾರ್ಜನೆ ವಿದ್ಯಾರ್ಥಿಯ ಬದುಕಿನ ಏಕೈಕ ನಿರ್ಧಾರವಾಗಬೇಕೆಂದು ಎಂದರು.


ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್‌ ರೈ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಭಾಗ್ಯಶ್ರೀ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top