
ಮಂಗಳೂರು: ಶೈಕ್ಷಣಿಕ ವರ್ಷ 2022-23ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳು/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು /ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲ್ಪಡುವ ವಿವಿಧ ಸ್ನಾತಕೋತ್ತರ/ ಪಿ.ಜಿ ಡಿಪ್ಲೋಮಾ ಡಿಪ್ಲೋಮಾ /ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ https://uucms.karnataka.gov.in/Login/Index ನಲ್ಲಿ ಲಭ್ಯವಿರುವ UUCMS Portal ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 3 ರಿಂದ ನವೆಂಬರ್ 12 ರವರೆಗೆ ವಿಸ್ತರಿಸಲಾಗಿದೆ.
ಸಂಬಂಧಪಟ್ಟ ಸ್ನಾತಕೋತ್ತರ ಕಾರ್ಯಕ್ರಮಗಳ ಪ್ರವೇಶಾತಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಗಳಿಗೆ ನಿಗದಿಪಡಿಸಲಿರುವ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.mangaloreuniversity.ac.in ನಲ್ಲಿ ಪಡೆಯಬಹುದು, ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ