ಮಂಗಳೂರು: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕಾನೂನು ನೆರವು ಮತ್ತು ನಾಗರಿಕ ಸಬಲೀಕರಣ ಅಭಿಯಾನ ಯಶಸ್ವಿಯಾಗಿ ನಡೆಯಿತು.
ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಬಿ.ಜಿ. ಶೋಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಜೈಲುಗಳಲ್ಲಿ ಖೈದಿಗಳಾಗಿ ಇರುವವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಅವರಿಗೆ ಕಾನೂನು ನೆರವನ್ನು ನೀಡುವ ಉದಾತ್ತ ಅಭಿಯಾನ ಇದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇದು ಯಶಸ್ವಿಯಾಗಿ ನಡೆದಿದ್ದು ಎಲ್ಲ ಖೈದಿಗಳಲ್ಲೂ ನ್ಯಾಯದಾನ ವ್ಯವಸ್ಥೆ ಬಗ್ಗೆ ವಿಶ್ವಾಸ ಮೂಡಿಸಲಾಗಿದೆ ಎಂದು ಅವರು ಸಂತೃಪ್ತಿ ವ್ಯಕ್ತಪಡಿಸಿದರು.
ಜಿಲ್ಲಾ ಬಂಧೀಖಾನೆ ಅಧಿಕಾರಿ ಓಬಳೇಶಪ್ಪ, ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾದ ಪ್ರಫುಲ್ಲ, ಅರವಿಂದ ಎ., ಶುಕರಾಜ ಕೊಟ್ಟಾರಿ ಮತ್ತು ಸುಕೇಶ್ ಕುಮಾರ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ಯಾರಾ ಲೀಗಲ್ ಕಾರ್ಯಕರ್ತರಾಗಿ ಎಸ್.ಡಿ.ಎಂ. ಕಾನೂನು ವಿದ್ಯಾನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ