ತೆಂಕನಿಡಿಯೂರು ಕಾಲೇಜಿನಲ್ಲಿ ಗ್ರಂಥಾಲಯ ಸಪ್ತಾಹ

Upayuktha
0

ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಗ್ರಂಥಾಲಯ ಮಾಹಿತಿ ಮತ್ತು ಕೇಂದ್ರ ವಿಭಾಗದಿಂದ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದ ಉದ್ಘಾಟನೆ ಮಾಡಿದ ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕರಾದ ಕೃಷ್ಣ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಗ್ರಂಥಾಲಯದ ಸದ್ಭಳಕೆ ಮಾಡಿದಲ್ಲಿ ಖಂಡಿತಾ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬಲ್ಲರು ಇಂದಿನ ಡಿಜಿಟಲ್ ಯುಗದಲ್ಲಿ ಇ-ರಿಸೋರ್ಸಸ್ ಬಳಕೆಯು ವಿದ್ಯಾರ್ಥಿಗಳಲ್ಲಿ ಕೌಶಲಗಳನ್ನು ಬೆಳೆಸಿ ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ವಿದ್ಯಾರ್ಥಿಗಳನ್ನು ಸಮರ್ಥರನ್ನಾಗಿಸುತ್ತದೆ. ಗ್ರಂಥಾಲಯದ ಪುಸ್ತಕಗಳಲ್ಲಿ ಧೂಳು ಕುಳಿತುಕೊಳ್ಳದ ನಿರಾಶಾದಾಯಕ ಇಂದಿನ ಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಗ್ರಂಥಾಲಯ ಕಡೆ ಮುಖ ಮಾಡುವ ಇಂತಹ ಕಾರ್ಯಕ್ರಮಗಳು ಶ್ಲಾಘನೀಯವೆಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ವಿಭಾಗ ಮುಖ್ಯಸ್ಥ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್. ಕಾರ್ಲ್ಮಾರ್ಕ್ಸ್, ಅಂಬೇಡ್ಕರ್ ರಂತಹ ಮಹಾಶಯರು ಗ್ರಂಥಾಲಯಲ್ಲಿ ಹೆಚ್ಚು ಸಮಯ ಕಳೆದು ಜ್ಞಾನ ಸಂಪಾದಿಸಿ ಸಮುದಾಯದ ಏಳಿಗೆಗೆ ನೀಡಿದ ಕೊಡುಗೆಯುನ್ನು ಸ್ಮರಿಸಿದರು.


ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಶ್ರೀ ರಾಧಾಕೃಷ್ಣ, ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು. ಕಾಲೇಜಿನ ಗ್ರಂಥಪಾಲಕರಾದ ಶ್ರೀ ಕೃಷ್ಣ ಸಾಸ್ತಾನ ಕಾರ್ಯಕ್ರಮ ಆಯೋಜಿಸಿ ಸಪ್ತಾಹದ ಸರಣಿ ಕಾರ್ಯಕ್ರಮದ ವಿವರಣೆ ನೀಡಿದರು.


ರಾಜ್ಯಶಾಸ್ತç ಸಹಾಯಕ ಪ್ರಾಧ್ಯಾಪಕ ಶ್ರೀ ಪ್ರಶಾಂತ ಎನ್. ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರೆ, ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ವೆಂಕಟೇಶ ಹೆಚ್.ಕೆ. ವಂದಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಕು. ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು.


ನಂತರದಲ್ಲಿ ರಾಷ್ಟçಕವಿ ಕುವೆಂಪುರವರ ಕೃತಿಗಳ ಪುಸ್ತಕ ಪ್ರದರ್ಶನವನ್ನು ಗ್ರಂಥಾಲಯದಲ್ಲಿ ಏರ್ಪಡಿಸಲಾಯಿತು. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಜೊತೆಗೆ ಮುನಿಯಾಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶ್ರೀ ಮಂಜುನಾಥ ಆಚಾರ್ಯ ಎಳ್ಳಂಪಳ್ಳಿ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ವಿಶ್ವನಾಥ ಕರಬ ಇನ್ನಿತರರು ವೀಕ್ಷಿಸಿದರು.


ಸಪ್ತಾಹದ ಅಂಗವಾಗಿ ನಿಘಂಟುಗಳು, ವಿಶ್ವಕೋಶ, ಇಂಗ್ಲೀಷ್ ಸಾಹಿತ್ಯ ಕೃತಿಗಳು, ಜನಪದ ಸಾಹಿತ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿದೆ. ಜೊತೆಗೆ ಏಳು ದಿನಗಳು ಕೂಡಾ ವಿವಿಧ ವಿಷಯಗಳ ಬಗ್ಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಏರ್ಪಡಿಸಲಾಗಿದೆ. ಈ ಸಪ್ತಾಹದಲ್ಲಿ ಬೋಧಕ/ಬೋಧಕೇತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top